ಕಳಸ : (ನ್ಯೂಸ್ ಮಲ್ನಾಡ್ ವರದಿ) ನದಿಗೆ ಈಜಲು ತೆರಳಿದ ಇಬ್ಬರು ಯುವಕರು ನೀರುಪಾಲಾದ ಘಟನೆ ಕಳಸದಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಭದ್ರಾ ನದಿಗೆ ಸ್ನಾನಕ್ಕೆಂದು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ನಿನ್ನೆ ಮನೆಯಿಂದ ಕಾಲೇಜಿಗೆಂದು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಮೊದಲು ಕಳಸದ ಕೆಪಿಎಸ್ ಕಾಲೇಜಿಗೆ ತೆರಳಿದ್ದರು ನಂತರದಲ್ಲಿ ಭದ್ರಾ ನದಿಗೆ ಈಜಲು ತೆರಳಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಥಮ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಹಿರೇಬೈಲ್ ಗ್ರಾಮದ ಜೀವನ್ ದಾಸ್ (17) ಹಾಗೂ ಹೆಮ್ಮಕ್ಕಿ ಗ್ರಾಮದ ನಿಕ್ಷೇಪ್ (17) ಇಬ್ಬರು ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ನದಿಯಲ್ಲಿ ಜೀವನ್ ದಾಸ್ ನ ಮೃತದೇಹ ದೊರೆತಿದ್ದು, ನಿಕ್ಷೇಪ್ ನ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ.

ಘಟನಾ ಸ್ಥಳದಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು ಸ್ಥಳಕ್ಕಾಗಮಿಸುತ್ತಿದ್ದಾರೆ. ಮಕ್ಕಳನ್ನು ನೆನೆದು ಮೃತರ ಪೋಷಕರು ತಾಳಲಾರದ ನೋವನ್ನು ವ್ಯಕ್ತಪಡಿಸಿದ್ದಾರೆ ಹಾಗೂ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಬೇಸರವನ್ನು ವ್ಯಕ್ತಪಡಿಸಿದ್ದಾರೆ.  

ತನು ಕೊಟ್ಟಿಗೆಹಾರ, ವರದಿಗಾರರು.