ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಮತ್ತೆ ಹುಲಿದಾಳಿ ಸಂಭವಿಸಿದೆ. ಕೆಲ ದಿನಗಳ ಕಾಲ ನಿರಾತಂಕವಾಗಿದ್ದ ಸಾರ್ವಜನಿಕರು ಮತ್ತೆ ಕಂಗಾಲಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಹೊಕ್ಕಳ್ಳಿ ಗ್ರಾಮದ ರಘು ಮಂಜುನಾಥ್ ಅವರ ಗದ್ದೆಯಲ್ಲಿ ಹಸುವಿನ ಮೇಲೆ ಹುಲಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.
ಕಳೆದ ಮೂರು ನಾಲ್ಕು ತಿಂಗಳುಗಳಿಂದ ಹತ್ತಾರು ಹಸುಗಳ ಮೇಲೆ ಹುಲಿ ದಾಳಿ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ರಕ್ಷಕ ಮೊಹಸಿನ್ ಮತ್ತು ಪಶುವೈದ್ಯರಾದ ಅಭಿಜಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತನು ಕೊಟ್ಟಿಗೆಹಾರ, ವರದಿಗಾರರು.

0 Comments