ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ದಿನಾಂಕ 19 ಡಿಸೆಂಬರ್ ರಂದು ನಡೆಯುವ ದತ್ತ ಜಯಂತಿಯ ಅಂಗವಾಗಿ ಇಂದು ಚಿಕ್ಕಮಗಳೂರಿನಲ್ಲಿ ಇಂದು ಬೃಹತ್ ಶೋಭಾಯಾತ್ರೆ ನಡೆಯಿತು.
ಚಿಕ್ಕಮಗಳೂರು ನಗರದಲ್ಲಿ ನಡೆದ ಈ ಶೋಭಾಯಾತ್ರೆಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ದತ್ತಮಾಲಾಧಾರಿಗಳು ಹಾಗೂ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಸೇರಿದ್ದರು. ಜೈ ಶ್ರೀ ರಾಮ್ ಘೋಷಣೆ ಮೊಳಗಿಸುತ್ತಾ ಶೋಭಾಯಾತ್ರೆ ನಡೆಸಿದರು. ಅಧಿಕ ಸಂಖ್ಯೆಯಲ್ಲಿ ಸೇರಿದ್ದ ಜನರನ್ನು ನಿಯಂತ್ರಣ ಮಾಡುವುದು ಬಹಳ ಕಠಿಣವಾಗಿತ್ತು.
ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ :
ನಾಳೆ ದತ್ತ ಜಯಂತಿಯ ಅಂಗವಾಗಿ ದತ್ತಮಾಲಾಧಾರಿಗಳು ಬೃಹತ್ ಸಂಖ್ಯೆಯಲ್ಲಿ ದತ್ತಾತ್ರೇಯ ಪೀಠಕ್ಕೆ ಆಗಮಿಸುವ ಸಲುವಾಗಿ ಯಾವುದೇ ಅಹಿತಕರ ಘಟನೆಗಳು ಉಂಟಾಗದಂತೆ ಪೊಲೀಸ್ ಇಲಾಖೆಯು ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸರ ನಿಯೋಜನೆ ಮಾಡಿದೆ ಹಾಗೂ ಚೆಕ್ ಪೋಸ್ಟ್ ಗಳ ನಿರ್ಮಾಣ ಮಾಡಿದೆ. ಮಧ್ಯದ ಅಂಗಡಿಗಳು ಹಾಗೂ ಚಿಕ್ಕಮಗಳೂರಿನ ಹಲವೆಡೆ ಅಂಗಡಿ ಮುಂಗಟ್ಟುಗಳನ್ನು ನಾಳೆ ಬಂದ್ ಮಾಡುವಂತೆ ಇಲಾಖೆ ಈಗಾಗಲೇ ಆದೇಶ ಹೊರಡಿಸಿದೆ. ಜಿಲ್ಲೆಯಾದ್ಯಂತ ಯಾವುದೇ ಸಮಸ್ಯೆಗಳು ಉಂಟಾಗದಂತೆ ಇಲಾಖೆ ಈಗಾಗಲೇ ಕಟ್ಟೆಚ್ಚರವಹಿಸಿದೆ.

0 Comments