ಹಾಸನ :(ನ್ಯೂಸ್ ಮಲ್ನಾಡ್ ವರದಿ) ಈ ಹಿಂದೆ ಹಾಸನದಲ್ಲಿ ವಿಧಾನ ಪರಿಷತ್ ಚುನಾವಣಾ ಸಂಬಂಧಿತ ನಡೆದ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆಯೇ ಮಾರಾಮಾರಿ ನಡೆದಿತ್ತು. ಈ ಸಂಬಂಧ ಮೂರು ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಹಾಸನದಲ್ಲಿ ನಡೆದ ವಿಧಾನ ಪರಿಷತ್ ಚುನಾವಣಾ ಸಭೆಯಲ್ಲಿ ಮೂಲ ಬಿಜೆಪಿಗರು ಹಾಗೂ ವಲಸಿಗರ ನಡುವೆ ಗಲಾಟೆ ನಡೆದಿತ್ತು. ಇತರ ಪಕ್ಷದ ಕಾರ್ಯಕರ್ತರನ್ನು ಬಿಜೆಪಿಗೆ ತರುವ ಸಲುವಾಗಿ ಬಿಜೆಪಿಯ ಎರಡೂ ಬಣದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿತ್ತು.
ಈ ಹಿಂದಿನ ಘಟನೆಯಲ್ಲಿ ಹಲ್ಲೆಗೊಳಗಾಗಿದ್ದ ವಿಜಿಕುಮಾರ್ ಅವರ ಆಪ್ತರಾದ ಮೋಹನ್ ಅವರಿಂದ ಸಂತೋಷ್ ಬಣದ ಐವರ ಮೇಲೆ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಗೂ ವಿಜಿಕುಮಾರ್ ಜೊತೆಗಿದ್ದವರ ಮೇಲೆ ಕೂಡ ಕೇಸ್ ದಾಖಲಾಗಿದೆ, ಪರಸ್ಪರ ಒಬ್ಬರ ಮೇಲೊಬ್ಬರು ದೂರು ನೀಡಿದ್ದು ಎರಡೂ ಬಣದ ಕಾರ್ಯಕರ್ತರ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಹಾಗೂ ಎರಡೂ ಗುಂಪುಗಳ ಒಬ್ಬೊಬ್ಬರ ಮೇಲೆ ಸಾರ್ವಜನಿಕರ ನೆಮ್ಮದಿಯ ವಿರುದ್ಧವಾಗಿ ವರ್ತನೆ ತೋರಿದ ಕಾರಣ ಪೊಲೀಸರೇ ಮತ್ತೊಂದು ಎಫ್ ಐ ಆರ್ ದಾಖಲು ಮಾಡಿಕೊಂಡಿದ್ದಾರೆ.
ಘಟನೆಯ ಕುರಿತಾಗಿ ಅರಸೀಕೆರೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎರಡೂ ಗುಂಪಿನವರನ್ನು ವಿಚಾರಣೆ ನಡೆಸುತ್ತಿದ್ದಾರೆ.

0 Comments