ಕೊಪ್ಪ : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಹಲವೆಡೆಗಳಲ್ಲಿ ಇಂದು ಅಪಘಾತಗಳು ಸಂಭವಿಸುತ್ತಲೇ ಇದೆ. ಕೊಪ್ಪ ಪಟ್ಟಣದ ಸಮೀಪದಲ್ಲಿ ನಡೆದ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಗ್ನಿಶಾಮಕ ದಳದ ವಾಹನ ಹಾಗೂ ಸ್ಕೂಟಿಯ ನಡುವೆ ಈ ಅಪಘಾತ ಸಂಭವಿಸಿದೆ. ಅಗ್ನಿಶಾಮಕ ದಳದ ಹಿಂಬದಿಯ ಚಕ್ರಕ್ಕೆ ಸ್ಕೂಟಿಯಲ್ಲಿ ಬರುತ್ತಿದ್ದ ಮಹಿಳೆಯು ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕೊಪ್ಪ ಪಟ್ಟಣದ ದ್ಯಾವೇಗೌಡ ವೃತ್ತದಿಂದ ವಾಟರ್ ಟ್ಯಾಂಕ್ ವೃತ್ತದ ಕಡೆಗೆ ತೆರಳುತ್ತಿದ್ದ ಅಗ್ನಿಶಾಮಕದಳದ ವಾಹನದ ಹಿಂದಿನ ಚಕ್ರಕ್ಕೆ ಸ್ಕೂಟಿ ಚಾಲನೆ ಮಾಡುತ್ತಿದ್ದ ಮಹಿಳೆಯು ಸಿಲುಕಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಸೂಕ್ತ ಕಾರಣವೇನೆಂದು ತನಿಖೆಯ ನಂತರವೇ ತಿಳಿಯಬೇಕಿದೆ.