ಮಡಿಕೇರಿ : (ನ್ಯೂಸ್ ಮಲ್ನಾಡ್ ವರದಿ) ಕ್ರೀಡೆ ದೈಹಿಕ ಹಾಗೂ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಸೂಕ್ತವಾದದ್ದು, ಆಟ ಆಡುತ್ತಲೆ ಆಟಗಾರನೊಬ್ಬ ಸಾವನ್ನಪ್ಪಿದ ಘಟನೆ ಕೊಡಗಿನ ಮೂರ್ನಾಡು ಗ್ರಾಮದಲ್ಲಿ ನಡೆದಿದೆ.

ಹಾಕಿ ಪಂದ್ಯಾವಳಿ ನಡೆಯುವ ಸಮಯದಲ್ಲಿ ಅತ್ಯಂತ ಉತ್ಸಾಹದಿಂದ ಆಟ ಆಡುತ್ತಿದ್ದ ಯುವಕನೊಬ್ಬನಿಗೆ ಮೈದಾನದಲ್ಲೇ ತೀವ್ರ ಹೃದಯಾಘಾತ ಸಂಭವಿಸಿದೆ. ಸ್ಥಳದಲ್ಲೇ ಕುಸಿದು ಬಿದ್ದ ಆತನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಆದರೆ ಮಾರ್ಗ ಮಧ್ಯೆಯೇ ಯುವಕನು ಕೊನೆ ಉಸಿರೆಳೆದಿದ್ದಾನೆ.

ಹೃದಯಾಘಾತದಿಂದ ಮೃತಪಟ್ಟ ಯುವಕನನ್ನು ಸೋಮಯ್ಯ ಎಂದು ಗುರುತಿಸಲಾಗಿದೆ. ಅತ್ಯಂತ ಚಟುವಟಿಕೆಗಳಿಂದ ಕೂಡಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವುದು ಗೆಳೆಯರಿಗೆ ಹಾಗೂ ನೆರೆದಿದ್ದ ಕ್ರೀಡಾಭಿಮಾನಿಗಳಿಗೆ ಬೇಸರತರಿಸಿದೆ. 

ಅತ್ಯಂತ ಖುಷಿ ಹಾಗೂ ದುಃಖದ ಸಂದರ್ಭಗಳಲ್ಲಿ ಧೃತಿಗೆಡದೆ ಎರಡನ್ನೂ ಸಮಾನವಾಗಿ ಸ್ವೀಕಾರ ಮಾಡಿದರೆ ಹೃದಯವು ಒತ್ತಡಕ್ಕೆ ಒಳಗಾಗದೆ ಇರುತ್ತದೆ ಎಂದು ವೈದ್ಯರು ಈ ಕುರಿತಾಗಿ ಸಲಹೆ ನೀಡಿದ್ದಾರೆ.