ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಓಮಿನಿ ಕಾರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಘಟನೆ ಶೃಂಗೇರಿಯ ನೆಮ್ಮಾರು ಸಮೀಪದಲ್ಲಿ ನಡೆದಿದೆ. 

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಸಮೀಪದ ಮಾಣಿಬೈಲು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು ಓಮಿನಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಕೂಡ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದವರು ಕೇರಳ ಮೂಲದವರೆಂದು ತಿಳಿದುಬಂದಿದೆ. 

ಮಧ್ಯಾಹ್ನ ಸುಮಾರು 2.30 ರ ಸಮಯದಲ್ಲಿ ಈ ಘಟನೆ ನಡೆದಿದ್ದು ಕೂಡಲೇ ಸ್ಥಳೀಯರು ಧಾವಿಸಿ ಕಾರಿನಲ್ಲಿದ್ದವರನ್ನು ಮೇಲಕ್ಕೆತ್ತಿದ್ದಾರೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದವರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.