ಕೊಪ್ಪ : (ನ್ಯೂಸ್ ಮಲ್ನಾಡ್ ವರದಿ) ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆಯ ಎಲ್ಲಾ ವಸ್ತುಗಳು ನಾಶವಾದ ಘಟನೆ ಕೊಪ್ಪ ತಾಲೂಕಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮರಿತೊಟ್ಲು ಗ್ರಾಮದ ಹುಲುಗಾರಿನ ಶಾಂತಾ ಎಂಬುವವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಈ ಅವಘಡ ನಡೆದಿದೆ ಎಂದು ತಿಳಿದುಬಂದಿದೆ. ಬೆಂಕಿಯ ಕೆನ್ನಾಲಿಗೆಗೆ ಮನೆಯ ಎಲ್ಲಾ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಬೂದಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಬಿಜೆಪಿ ಮುಖಂಡ ಹೊಸೂರು ದಿನೇಶ್ ಅವರು ಭೇಟಿ ನೀಡಿ ಸಹಾಯ ಮಾಡಿ, ಸರ್ಕಾರದ ವತಿಯಿಂದ ಬರುವ ಪರಿಹಾರವನ್ನು ದೊರಕಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಾಂತಾ ಅವರ ಮನೆಗೆ ಮರಿತೊಟ್ಟಿಲು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಬಿಜೆಪಿ ಮುಖಂಡರು ತೆರಳಿ ಅವರಿಗೆ ಧೈರ್ಯ ತುಂಬಿದರು ಹಾಗೂ ಪರಿಹಾರ ನೀಡುವ ಭರವಸೆ ನೀಡಿದ್ದಾರೆ ಎಂಬ ಮಾಹಿತಿ ದೊರೆತಿದೆ.

0 Comments