ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಕಾಲೇಜು ವಿದ್ಯಾರ್ಥಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಮಾಡಿದ ಘಟನೆ ಬೇಲೂರು ವೃತ್ತದಲ್ಲಿ ನಡೆದಿದೆ.

ತರಗತಿಯನ್ನು ಮುಗಿಸಿಕೊಂಡು ಹಿಂದಿರುಗುವ ಸಮಯದಲ್ಲಿ ಈ ದಾಳಿ ನಡೆದಿದ್ದು ಲಾಂಗ್ ನಿಂದ ಓರ್ವ ವಿದ್ಯಾರ್ಥಿಯ ಮೇಲೆ ಏಕಾಏಕಿ ದಾಳಿ ನಡೆದಿದೆ. ಕಾಲೇಜು ವಿದ್ಯಾರ್ಥಿಗಳ ಮಧ್ಯೆ ದತ್ತ ಜಯಂತಿಯ ಶೋಭಾಯಾತ್ರಾ ಸಮಯದಲ್ಲಿ ಕೆಲ ಗೊಂದಲ ಉಂಟಾಗಿತ್ತು ಎಂದು ತಿಳಿದುಬಂದಿದೆ.

ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಕೆಂಪನ ಹಳ್ಳಿಯ ಆಕಾಶ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವಕನ ಸ್ಥಿತಿಯು ಗಂಭೀರವಾಗಿದೆ ಎಂದು ತಿಳಿದುಬಂದಿದೆ. 

ಘಟನೆಯ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದು ಓರ್ವ ನಾಪತ್ತೆಯಾಗಿದ್ದಾನೆ. ಘಟನೆಯ ಸಂಬಂಧ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಈ ಕುರಿತು ತನಿಖೆ ಆರಂಭಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳು ವಿದ್ಯಾರ್ಥಿಗಳು ಈ ರೀತಿಯ ಮಾರಕಾಸ್ತ್ರಗಳ ಪ್ರಯೋಗ ಮಾಡುತ್ತಿರುವುದು ಸಾರ್ವಜನಿಕರನ್ನು ಆತಂಕಕ್ಕೀಡುಮಾಡಿದೆ.