ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿಯ ಜಗದ್ಗುರು ಚಂದ್ರಶೇಖರ ಭಾರತೀ ಮೆಮೋರಿಯಲ್ ಕಾಲೇಜಿನ (ಜೆಸಿಬಿಎಂ) ವಿದ್ಯಾರ್ಥಿಗಳು ಕುವೆಂಪು ವಿಶ್ವ ವಿದ್ಯಾಲಯದ ಕಬಡ್ಡಿ ತಂಡಕ್ಕೆ ಹಾಗೂ ಟೇಬಲ್ ಟೆನ್ನಿಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಶ್ರೀ ಜೆ ಸಿ ಬಿ ಎಂ ಕಾಲೇಜಿನ ವಿದ್ಯಾರ್ಥಿಯಾದ ಪ್ರತಾಪ್ ತೃತೀಯ ಬಿ.ಎ ಓದುತ್ತಿದ್ದು ಕುವೆಂಪು ವಿಶ್ವ ವಿದ್ಯಾಲಯದ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ, ಚೆನ್ನೈನ ಭಾರಥಿದಾಸನ್ ವಿಶ್ವವಿದ್ಯಾಲಯದಲ್ಲಿ ಡಿಸೆಂಬರ್ 24 ರಂದು ನಡೆಯುವ ಸೌತ್ ಝೋನ್ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ. ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆಗಳನ್ನು ಕಾಲೇಜಿನ ವಿದ್ಯಾರ್ಥಿಗಳು ಮಾಡಿದ್ದಾರೆ ಎಂದು ದೈಹಿಕ ನಿರ್ದೇಶಕರಾದ ರವಿಕಿರಣ್ ಹರ್ಷ ವ್ಯಕ್ತಪಡಿಸಿದ್ದಾರೆ. ಹಾಗೂ ಮುಂದಿನ ದಿನಗಳಲ್ಲಿ ಕ್ರೀಡಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇನ್ನೂ ಉತ್ತಮ ತರಬೇತಿಗಳನ್ನು ನೀಡುವುದಾಗಿ ತಿಳಿಸಿದ್ದಾರೆ.
ಜ್ಞಾನ ಸಹ್ಯಾದ್ರಿ ಶಂಕರಘಟ್ಟದಲ್ಲಿ ನಡೆದ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಟೇಬಲ್ ಟೆನ್ನಿಸ್ ಪಂದ್ಯಾವಳಿ ಹಾಗೂ ಆಯ್ಕೆಯಲ್ಲಿ ಭಾಗವಹಿಸಿ ಪುರುಷ ಮತ್ತು ಮಹಿಳಾ ಎರಡು ತಂಡಗಳು ಪ್ರಥಮ ಸ್ಥಾನವನ್ನುಗಳಿಸಿದೆ.
ಕುವೆಂಪು ವಿಶ್ವವಿದ್ಯಾಲಯದ ತಂಡಕ್ಕೆ ಪುರುಷರ ವಿಭಾಗದಲ್ಲಿ ಶಾಕಿರ್ ಝಮನ್ ಬಿಕಾಂ ಮತ್ತು ವಿಜೇಂದ್ರ, ಮಹಿಳಾ ವಿಭಾಗದಲ್ಲಿ ರಚನ ಬಿಎಸ್ಸಿ , ಶ್ರೀ ರಕ್ಷಾ ಬಿಎಸ್ಸಿ ಇವರುಗಳು ಆಯ್ಕೆಯಾಗಿದ್ದಾರೆ. ಇವರಿಗೆ ಕಾಲೇಜಿನ ಪ್ರಾಂಶುಪಾಲರಾದ ಎಂ ಸ್ವಾಮಿ, ಕಾಲೇಜಿನ ವಿಶ್ವಸ್ಥ ಮಂಡಳಿಯವರು ಮತ್ತು ದೈಹಿಕ ನಿರ್ದೇಶಕರಾದ ರವಿಕಿರಣ್, ಬೋಧಕ, ಬೋಧಕೇತರ ಸಿಬ್ಬಂದಿವರ್ಗ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

0 Comments