ತರೀಕೆರೆ :(ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಅಕ್ರಮ ಚಟುವಟಿಕೆಗಳು ನಶೆಬರಿಸುವ ವಸ್ತುಗಳ ಸಾಗಣೆಯ ಕುರಿತಾಗಿ ಪೊಲೀಸರು ತೀವ್ರ ತಪಾಸಣೆ ನಡೆಸುತ್ತಿದ್ದರು ಕೂಡ ಜಿಲ್ಲೆಯ ಹಲವು ಕಡೆಗಳಲ್ಲಿ ಈ ರೀತಿಯ ಘಟನೆಗಳು ನಡೆಯುತ್ತಲೇ ಇದೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಸೊಪ್ಪು ಸಾಗಾಟ ನಡೆಸುತ್ತಿದ್ದ ಓರ್ವ ಆರೋಪಿಯನ್ನು ತರೀಕೆರೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಬಳಿಯಿದ್ದ 3.5 ಕೆಜಿ ಗಾಂಜಾವನ್ನು ಹಾಗೂ ಗಾಂಜಾ ಸಾಗಣೆಗೆ ಬಳಸಿದ್ದ ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪೊಲೀಸರು ಈ ದಾಳಿ ನಡೆಸುವ ಸಮಯದಲ್ಲಿ ಬಂಧಿತನ ಜೊತೆಗಿದ್ದ ಇನ್ನೋರ್ವ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ. ಆತನನ್ನು ಸೆರೆ ಹಿಡಿಯುವ ಸಲುವಾಗಿ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಜಿಲ್ಲೆಯ ಹಲವೆಡೆಗಳಲ್ಲಿ ಈ ರೀತಿಯಾದ ಅಕ್ರಮ ಗಾಂಜಾ ಸಾಗಾಟ ಹಾಗೂ ಮಾರಾಟದ ಜಾಲ ನಡೆಯುತ್ತಿದ್ದು ಕಳೆದ ಕೆಲ ತಿಂಗಳುಗಳಿಂದ ಪೊಲೀಸರು ಹಲವಾರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಹಾಗೂ ಕಾನೂನಿನ ಅಡಿಯಲ್ಲಿ ಸೂಕ್ತ ಕ್ರಮ ಜರುಗಿಸುತ್ತಿದ್ದಾರೆ.

0 Comments