ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ವ್ಯಕ್ತಿಯೋರ್ವ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಸೊರಬದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಬೆನ್ನೂರು ಗ್ರಾಮದ ಕೆರೆಗೆ ಕೂಲಿ ಕಾರ್ಮಿಕನೋರ್ವ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾನೆ. ಘಟನೆಯು ತಡವಾಗಿ ಬೆಳಕಿಗೆ ಬಂದಿದ್ದು ನೀರಿನಲ್ಲಿ ಶವ ತೇಲುವುದನ್ನು ಕಂಡು ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಮೃತಪಟ್ಟ ವ್ಯಕ್ತಿಯನ್ನು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಮಾಸೂರು ಗ್ರಾಮದ ಲಕ್ಷ್ಮಣ ಸಾವಜ್ಜಿ ಎಂದು ಗುರುತಿಸಲಾಗಿದೆ. ಮೃತರು ಕೂಲಿ ಕೆಲಸಕ್ಕೆಂದು ಬೆನ್ನೂರಿಗೆ ಆಗಮಿಸಿದ್ದರು. ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದರು ಎಂಬ ಮಾಹಿತಿ ದೊರೆತಿದೆ.
ಘಟನೆಯ ಕುರಿತಾಗಿ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಘಟನಾ ಸ್ಥಳಕ್ಕೆ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಹಾಗೂ ಶವವನ್ನು ನೀರಿನಿಂದ ಹೊರತೆಗೆದಿದ್ದಾರೆ.

0 Comments