ಕೊಪ್ಪ : (ನ್ಯೂಸ್ ಮಲ್ನಾಡ್ ವರದಿ) ಆಕಸ್ಮಿಕವಾಗಿ ಅವಘಡ ಉಂಟಾದ ಕಾರಣ ಬೆಂಕಿಯ ಕೆನ್ನಾಲಿಗೆಗೆ ಮನೆಯು ಹೊತ್ತಿ ಉರಿದ ಘಟನೆ ಕೊಪ್ಪ ತಾಲೂಕಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಹೋಬಳಿಯ ಶಾನುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಬರವಳ್ಳಿ ಕಮಲಾಕ್ಷಿ ಶಂಕರಪ್ಪ ಗೌಡ ಎಂಬುವವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಹಾನಿಯಾಗಿದೆ. ಬೆಂಕಿಯ ತೀವ್ರತೆಗೆ ಮನೆ ಹಾಗೂ ಮನೆಯಲ್ಲಿದ್ದ ವಸ್ತುಗಳು ನಾಶಗೊಂಡಿದೆ.
ಬೆಂಕಿ ತಗುಲಿದ ತಕ್ಷಣವೇ ಅಗ್ನಿಶಾಮಕದಳದ ಸಿಬ್ಬಂದಿಗಳಿಗೆ ಕರೆ ಮಾಡಿ ವಿಷಯವನ್ನು ತಿಳಿಸಲಾಗಿದೆ. ಕೂಡಲೇ ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಸಫಲರಾಗಿದ್ದಾರೆ.
ಶೃಂಗೇರಿ ಪಟ್ಟಣದಲ್ಲಿ ಬೆಳಗ್ಗಿನ ಜಾವ ಸಂಭವಿಸಿದ ಅಗ್ನಿ ಅವಘಡ ತಪ್ಪಿದ ಭಾರೀ ದುರಂತ
ಆದರೆ ತೀವ್ರವಾಗಿ ಬೆಂಕಿಯು ಎಲ್ಲೆಡೆ ಚಾಚಿದ್ದು ಮನೆ ಹಾಗೂ ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣ ಹಾನಿಗೀಡಾಗಿದೆ. ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಮಕದಳದ ಸಿಬ್ಬಂದಿಗಳೊಂದಿಗೆ ಸ್ಥಳೀಯರು ಕೂಡ ಸಾಥ್ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮನೆಯವರಿಗೆ ಉಂಟಾದ ಈ ಭಾರೀ ಪ್ರಮಾಣದ ನಷ್ಟಕ್ಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸೂಕ್ತ ಪರಿಹಾರವನ್ನು ದೊರಕಿಸಬೇಕೆಂದು ಸ್ಥಳೀಯರು ಹಾಗೂ ಮನೆಯವರು ಮನವಿ ಸಲ್ಲಿಸಿದ್ದಾರೆ. ಆದಷ್ಟು ಶೀಘ್ರವಾಗಿ ಸರ್ಕಾರ ಕುಟುಂಬದವರ ನೆರವಿಗೆ ನಿಲ್ಲಬೇಕಿದೆ.

0 Comments