ಕಾಡಿನಸಂತ, ಕನ್ನಡ ಸಾಹಿತ್ಯ ಲೋಕದ ಮೇರು ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಧರ್ಮಪತ್ನಿ, ಲೇಖಕಿ ಶ್ರೀಮತಿ ರಾಜೇಶ್ವರಿ ತೇಜಸ್ವಿ(85) ಅವರು ಇಂದು ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ರಾಜೇಶ್ವರಿ ತೇಜಸ್ವಿ ಅವರು 1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯಂ ಹೊಸ ಬಡಾವಣೆಯಲ್ಲಿ ತೀರಾ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದವರು. ಹೆಣ್ಣುಮಕ್ಕಳಿಗೂ ತಮ್ಮ ಕಾಲ ಮೇಲೆ ನಿಂತುಕೊಳ್ಳುವ ವಿದ್ಯಾಭ್ಯಾಸ ಕೊಡಬೇಕೆನ್ನುವ ತಮ್ಮ ತಂದೆಯ ಉದಾತ್ತ ಧ್ಯೇಯದಿಂದಾಗಿ ತತ್ವಶಾಸ್ತ್ರದಲ್ಲಿ ಆನರ್ಸ್ ಮತ್ತು ಎಂ.ಎ ಮಾಡಲು ಮಾನಸ ಗಂಗೋತ್ರಿ ಮೈಸೂರಿಗೆ ಬಂದರು. ಆ ನಂತರ ಅಲ್ಲಿ ಪೂರ್ಣಚಂದ್ರ ತೇಜಸ್ವಿಯವರ ಪರಿಚಯವಾಗಿ ಇಬ್ಬರೂ ಪ್ರೀತಿಸಿ 1966ರಲ್ಲಿ ವಿವಾಹವಾದರು.
‘ನನ್ನ ತೇಜಸ್ವಿ’ ರಾಜೇಶ್ವರಿ ಅವರ ಮೊಟ್ಟ ಮೊದಲ ಪುಸ್ತಕವಾಗಿದೆ.
'ನಮ್ಮ ಮನೆಗೂ ಬಂದರು ಗಾಂಧೀಜಿ’ ಇವರ ಎರಡನೆಯ ಪುಸ್ತಕ.
ರಾಜೇಶ್ವರಿ ಅವರಿಗೆ ಇಬ್ಬರು ಮಕ್ಕಳಿದ್ದು ಇಬ್ಬರೂ ಸಾಫ್ಟ್ ವೇರ್ ಇಂಜಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
"ತೇಜಸ್ವಿಯವರು ಬದುಕಿದ್ದಾರೆ ಎಂದೇ ನಾನು ಬದುಕುತ್ತಿದ್ದೇನೆ. ಅವರಿಲ್ಲ ಎಂದು ನಾನೂ ಯಾವಾಗಲೂ ಅಂದುಕೊಂಡೇ ಇಲ್ಲ. ಇಂದಿಗೂ ರಾಜ್ಯದ ಮೂಲೆ ಮೂಲೆಗಳಿಂದ ತೇಜಸ್ವಿ ಅಭಿಮಾನಿಗಳು ಈ ಮನೆಗೆ ಬರುತ್ತಲೇ ಇರುತ್ತಾರೆ. ಅವರ ಪ್ರೀತಿ ಕಂಡು ನನಗೆ ಹೃದಯ ತುಂಬಿ ಬರುತ್ತದೆ" ಎನ್ನುತ್ತಿದ್ದ ರಾಜೇಶ್ವರಿ ತೇಜಸ್ವಿ ಅವರು ಇಹಲೋಕ ತ್ಯಜಿಸಿ ಪೂರ್ಣಚಂದ್ರ ತೇಜಸ್ವಿ ಅವರಲ್ಲಿ ಮತ್ತೆ ಒಂದಾಗಿದ್ದಾರೆ.

0 Comments