ಬಾಳೆಹೊನ್ನೂರು : (ನ್ಯೂಸ್ ಮಲ್ನಾಡ್ ವರದಿ) ಬಾಳೆಹೊನ್ನೂರಿನ ಸೀಗೊಡು ಸಮೀಪ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಒಬ್ಬರು ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಇಟ್ಟಿಗೆ ಸೀಗೋಡಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು ಶೃಂಗೇರಿಯಿಂದ ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದ ಟಾಟಾ ನೆಕ್ಸಾನ್ ವಾಹನವೊಂದು ರಭಸವಾಗಿ ಮರಕ್ಕೆ ಗುದ್ದಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಬೆಂಗಳೂರು ಮೂಲದ ವಾಹನ ಇದಾಗಿದೆ ಎಂದು ತಿಳಿದುಬಂದಿದೆ.
ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಐದು ಜನರಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಹಾಗೂ ಇನ್ನೋರ್ವ ವ್ಯಕ್ತಿಯ ಸ್ಥಿತಿ ಬಹಳ ಗಂಭೀರವಾಗಿದ್ದು ಕಾರಿನಲ್ಲಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕೂಡಲೇ ಸ್ಥಳೀಯರು ಧಾವಿಸಿ ವಾಹನದಲ್ಲಿದ್ದವರನ್ನು ಆಸ್ಪತ್ರೆಗೆ ದಾಖಲು ಮಾಡಲು ಸಹಕರಿಸಿದ್ದಾರೆ. ಗೀತಾ(28) ಎಂಬ ಮಹಿಳೆಯು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಓರ್ವನ ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ ಹಾಗೂ ಉಳಿದ ಗಾಯಾಳುಗಳನ್ನು ಬಾಳೆಹೊನ್ನೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

0 Comments