ಚಿಕ್ಕಮಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನ ಇಂದು ಸಂಜೆಯ ವೇಳೆಗೆ ಅಪಘಾತಕ್ಕೀಡಾಗಿದೆ. ಚಿಕ್ಕಮಗಳೂರಿನಲ್ಲಿ ಕಾರ್ಯಕ್ರಮ ಮುಗಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನ ಪರಿಷತ್ ಚುನಾವಣೆಗೆ ಚಿಕ್ಕಮಗಳೂರು ಜಿಲ್ಲೆಯಿಂದ ಸ್ಪರ್ಧೆ ನಡೆಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರ ಪರವಾಗಿ ಮತ ಯಾಚಿಸಲು ಆಗಮಿಸಿದ್ದರು. ಕಾರ್ಯಕ್ರಮವನ್ನು ಮುಗಿಸಿ ಅಲ್ಲಿಂದ ಹಿಂದಿರುಗಿ ಹೋಗುತ್ತಿದ್ದ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ.
ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಸಮೀಪ ಚಲಿಸುತ್ತಿದ್ದ ಬೆಂಗಾವಲು ವಾಹನವು ತಾಂತ್ರಿಕ ದೋಷದಿಂದಾಗಿ ಅಲ್ಲಿನ ಕಾಫಿ ತೋಟದ ಒಳ ಹೊಕ್ಕಿದೆ, ಪರಿಣಾಮ ಬೊಲೆರೋ ವಾಹನದಲ್ಲಿದ್ದ ಪೊಲೀಸ್ ಸಿಬ್ಬಂದಿಗಳಿಗೆ ಗಾಯವಾಗಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯರ ನೆರವಿನೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ, ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಸ್ಥಳದಲ್ಲಿ ನಿಂತು ಅಪಘಾತಕ್ಕೀಡಾದ ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲಿಸಲು ಸಹಾಯ ಮಾಡಿದರು.
ಘಟನೆಯ ಕುರಿತಾಗಿ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತನು ಕೊಟ್ಟಿಗೆಹಾರ, ವರದಿಗಾರರು.

0 Comments