ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆ ಶೃಂಗೇರಿ ತಾಲೂಕು ಹಾಗೂ ತೀರ್ಥಹಳ್ಳಿ ಗಡಿಭಾಗದ ಬಿದರಗೋಡು ಗ್ರಾಮದ ಯುವಕನೊಬ್ಬ ಉಡುಪಿ ಮೂಲದ ಹಿಂದೂ ಯುವತಿಯಳೊಡನೆ ಅಸಭ್ಯವಾಗಿ ವರ್ತಿಸಿ ಹಿಂದೂ ಸಂಘಟಕರ ಕೈಗೆ ಸಿಕ್ಕಿಬಿದ್ದ ಘಟನೆ ನಿನ್ನೆ ನಡೆದಿದೆ.

ಬಿದರಗೋಡಿನ ಸುನೈಫ್ ಇಬ್ರಾಹಿಂ ಎಂಬಾತ ಮಂಗಳೂರಿನಲ್ಲಿ  ಉಡುಪಿ ಮೂಲದ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ಹಾಗೂ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡು, ಥಳಿಸಿದ್ದಾರೆ. ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡಿದೆ.


ಸುನೈಫ್ ಇಬ್ರಾಹಿಂ ಮೂಲತಃ ಚಿಕ್ಕಮಗಳೂರು-ಶಿವಮೊಗ್ಗ ಗಡಿಭಾಗವಾದ ಬಿದರಗೋಡಿನವನು. ಉಡುಪಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇತ್ತೀಚಿಗೆ ಕಾರ್ಕಳ ಮೂಲದ ಹಿಂದೂ ಯುವತಿಯೊಂದಿಗೆ ತಿರುಗಾಡುತ್ತಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದನ್ನು ಹಿಂದೂ ಸಂಘಟಕರು ಗಮನಿಸಿದ್ದರು, ನಿನ್ನೆ ಬಸ್ಸಿನಲ್ಲಿ ಕಿಸ್ಸಿಂಗ್ ಮಾಡುತ್ತಿದ್ದ ಎಂದು ಅಲ್ಲಿನ ಸ್ಥಳೀಯರು ಆರೋಪಿಸಿ ಆತನನ್ನು ಹಿಡಿದಿದ್ದರು. ಈ ಕುರಿತಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. (ವೈರಲ್ ಆದ ವೀಡಿಯೋ ಲಿಂಕ್ ಇಲ್ಲಿದೆ) ಘಟನೆಯ ಕುರಿತಾಗಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

https://youtu.be/ABB2KM7x-Vc