ಚಿಕ್ಕಮಗಳೂರು :(ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರಿನ ದೇವರಹಳ್ಳಿ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಮೃತಪಟ್ಟಿದ್ದು ಓರ್ವನ ಸ್ಥಿತಿ ಬಹಳಷ್ಟು ಗಂಭೀರವಾಗಿದೆ ಎಂದು ಮಾಹಿತಿ ದೊರೆತಿದೆ.

ಚಿಕ್ಕಮಗಳೂರು ಜಿಲ್ಲೆಯ ದೇವರಹಳ್ಳಿ ಕ್ರಾಸ್ ಸಮೀಪದಲ್ಲಿ ಬೊಲೆರೋ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಬೈಕಿನಲ್ಲಿ ಪ್ರಯಾಣ ಮಾಡುತ್ತಿದ್ದ ನವೀನ್ ಹಾಗೂ ರಾಮು ಎಂಬ ಇಬ್ಬರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮೂವರು ಬೈಕಿನಲ್ಲಿ ಸಂಚಾರ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಇನ್ನೋರ್ವ ಅಭಿಷೇಕ್ ಎಂಬಾತನನ್ನು ಸ್ಥಳೀಯ ಅಸ್ಪತೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ ಘಟನೆಯ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಬೊಲೆರೋ ವಾಹನದ ಚಾಲಕನು ಓಡಿಹೋಗಿದ್ದಾನೆ ಎಂದು ತಿಳಿದುಬಂದಿದೆ. 

ವಾಹನ ಸವಾರರು ಅತೀ ಹೆಚ್ಚಿನ ಜಾಗರೂಕತೆಯಿಂದ ನಿಯಮಿತ ವೇಗದೊಂದಿಗೆ ವಾಹನ ಚಾಲನೆ ಮಾಡಿದರೆ ಈ ರೀತಿಯ ದುರ್ಘಟನೆಗಳು ಸಂಭವಿಸುವುದು ಕಡಿಮೆಯಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.