ಕೊಪ್ಪ : (ನ್ಯೂಸ್ ಮಲ್ನಾಡ್ ವರದಿ) ಕೋಪದಲ್ಲಿರುವ ಪ್ರಶಮನಿ ಆಸ್ಪತ್ರೆಯಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರಚಿಕಿತ್ಸಾ ಶಿಬಿರದ ಆಯೋಜನೆಯಾಗಿದೆ.


ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಪ್ರತಿಷ್ಠಿತ ಪ್ರಶಮನಿ ಆಸ್ಪತ್ರೆಯು ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಉಪಯುಕ್ತವಾಗುವಂತೆ ನೇತ್ರ ತಪಾಸಣಾ ಹಾಗೂ ಶಸ್ತ್ರಚಿಕಿತ್ಸಾ ಶಿಬಿರವನ್ನು ಡಿಸೆಂಬರ್ 31ರ ಶುಕ್ರವಾರದಂದು ಆಯೋಜಿಸಿದೆ.

ಅರ್ಹ ರೋಗಿಗಳಿಗೆ ಅಂದೇ ತಪಾಸಣೆಯೊಂದಿಗೆ ಉಚಿತವಾಗಿ ಉಡುಪಿಯ ಪ್ರಸಾದ್ ನೇತ್ರಾಲಯದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಈ ನೇತ್ರ ತಪಾಸಣಾ ಹಾಗೂ ಶಸ್ತ್ರಚಿಕಿತ್ಸೆಯ ಶಿಬಿರವನ್ನು ಸಾರ್ವಜನಿಕರು ಹಾಗೂ ಅರ್ಹರು ಉಪಯೋಗಿಸಿಕೊಳ್ಳಬೇಕೆಂದು ಆಡಳಿತ ಮಂಡಳಿಯು ಮನವಿ ಮಾಡಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 08265 221996, 9380929325