ತೀರ್ಥಹಳ್ಳಿ : (ನ್ಯೂಸ್ ಮಲ್ನಾಡ್ ವರದಿ) ಬಂದೂಕಿನಿಂದ ಗುಂಡು ಹಾರಿಸಿಕೊಂಡು ಬಿಇಒ ಓರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಯಲಹಂಕದ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ತೀರ್ಥಹಳ್ಳಿ ಮೂಲದ ಕಮಲಾಕರ್ ಅವರು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ದೊರೆತಿದೆ. ಶವದ ಪಕ್ಕದಲ್ಲೇ ಡೆತ್ ನೋಟ್ ದೊರೆತಿದೆ ಎಂದು ತಿಳಿದುಬಂದಿದೆ.
ತೀರ್ಥಹಳ್ಳಿಯ ಟೆಂಕಬೈಲ್ ನಿಂದ ಆರಂಭವಾದ ಇವರ ವೃತ್ತಿ ಜೀವನ ಬೆಂಗಳೂರಿನ ಯಲಹಂಕದವರೆಗೂ ಸಾಗಿತ್ತು. ನಿವೃತ್ತಿಯ ಹೊಸ್ತಿಲಲ್ಲಿದ್ದ ಇವರು ಆತ್ಮಹತ್ಯೆಗೆ ಶರಣಾಗಿರುವುದು ಅನುಮಾನ ಮೂಡಿಸಿದೆ.
ಅನಾರೋಗ್ಯ ಕಾರಣದಿಂದಾಗಿ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ ಆದರೆ ಆತ್ಮಹತ್ಯೆಗೆ ನಿಖರ ಕಾರಣಗಳೇನು ಎಂದು ಈವರೆಗೆ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಯಲಹಂಕದ ಕೊಡಿಗೆಹಳ್ಳಿ ಪೊಲೀಸರು ಭೇಟಿ ನೀಡಿದ್ದು ಸ್ಥಳದಲ್ಲಿ ಪತ್ತೆಯಾದ ಡೆತ್ ನೋಟ್ ವಶಕ್ಕೆ ಪಡೆದಿದ್ದಾರೆ ಹಾಗೂ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

0 Comments