ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಅವರು ಇಂದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿರುವ ಕಾಂಗ್ರೆಸ್ ಕಛೇರಿಯಲ್ಲಿ ಅಂಶುಮಂತ್, ಶಾಸಕ ರಾಜೇಗೌಡ, ಸುಧೀರ್ ಕುಮಾರ್ ಮುರೊಳ್ಳಿ ಹಾಗೂ ಇತರ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸುಜಾತ ಕೃಷ್ಣಪ್ಪ ಅವರು ಸೇರ್ಪಡೆಗೊಂಡಿದ್ದಾರೆ.
ಈ ಹಿಂದೆ ಅವಧಿ ಪೂರ್ಣಗೊಂಡರು ಕೂಡ ಸುಜಾತ ಕೃಷ್ಣಪ್ಪ ಅವರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ ಆ ಕಾರಣಕ್ಕಾಗಿ ಬಿಜೆಪಿಯ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಸುಜಾತ ಕೃಷ್ಣಪ್ಪ ಅವರನ್ನು ಪಕ್ಷದಿಂದ ಅಮಾನತು ಮಾಡಿದ್ದರು.
ವಿಧಾನ ಪರಿಷತ್ ಚುನಾವಣೆಯ ಈ ಸಂದರ್ಭದಲ್ಲಿ ಈ ರೀತಿಯ ರಾಜಕೀಯ ಬೆಳವಣಿಗೆಗಳು ಕೆಲವರಿಗೆ ಸಂಕಷ್ಟ ತಂದೊಡ್ಡಿದ್ದರೆ ಇನ್ನೂ ಕೆಲವರು ನಯವಾಗಿ ಈ ರೀತಿಯ ಸಂದರ್ಭಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಒಟ್ಟಾರೆ ಚಿಕ್ಕಮಗಳೂರಿನ ಪರಿಷತ್ ಕಣವು ಬಹಳಷ್ಟು ಜಿದ್ದಾ ಜಿದ್ದಿನಿಂದ ಕೂಡಿದೆ.

0 Comments