ಕೊಡಗು : (ನ್ಯೂಸ್ ಮಲ್ನಾಡ್ ವರದಿ) ಕೊಡವ ಜನಾಂಗದ ಅಭಿವೃದ್ಧಿಗಾಗಿ ಹಾಗೂ ಕೊಡವರ ಉನ್ನತಿಗಾಗಿ ಯುನೈಟೆಡ್ ಕೊಡವ ಅರ್ಗನೈಸೇಷನ್ ಹಾಗೂ ವಿರಾಜಪೇಟೆ ಶಾಸಕರಾದ ಕೆ.ಜಿ ಬೋಪಯ್ಯರವರ ನೇತೃತ್ವದಲ್ಲಿ ಇಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಕೊಡವ ಅಭಿವೃದ್ದಿ ನಿಗಮವನ್ನು ಸ್ಥಾಪಿಸುವಂತೆ ಯುನೈಟೆಡ್ ಕೊಡವ ಆರ್ಗನೈಸೇಷನ್ ಹಾಗೂ ಶಾಸಕ ಕೆ.ಜಿ ಬೋಪಯ್ಯ, ಮಡಿಕೇರಿ ಶಾಸಕ ಅಪ್ಪಚ್ಚು ರಂಜಾನ್ ಅವರ ನೇತೃತ್ವದಲ್ಲಿ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಕುರಿತಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು ಕೊಡವ ಅಭಿವೃದ್ದಿ ನಿಗಮ ಸ್ಥಾಪಿಸುವ ಬಗ್ಗೆ ಮುಂದಿನ ಬಜೆಟ್ ನಲ್ಲಿ ಘೋಷಿಸಲಾಗುವುದು ಎಂಬ ಭರವಸೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿಗಳ ಹೇಳಿಕೆಯ ಕುರಿತಾಗಿ ಸಂತಸ ವ್ಯಕ್ತಪಡಿಸಿರುವ ಯುನೈಟೆಡ್ ಕೊಡವ ಅರ್ಗನೈಸೇಷನ್ ಪದಾಧಿಕಾರಿಗಳು ಮುಖ್ಯಮಂತ್ರಿಗಳ ಆಶ್ವಾಸನೆಯಲ್ಲಿ ಭರವಸೆ ಇದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

0 Comments