ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿಯ ಪಟ್ಟಣದಲ್ಲಿ ಇಂದು ಬೆಳಗ್ಗಿನ ಜಾವ ಅಗ್ನಿಅವಘಡ ಉಂಟಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಶೃಂಗೇರಿ ಪಟ್ಟಣದಲ್ಲಿರುವ ಬಿಇಒ ಕಛೇರಿ ಪಕ್ಕದ ಕಟ್ಟಡಕ್ಕೆ ಬೆಂಕಿ ತಗುಲಿದೆ. ಬೆಳಗ್ಗಿನ ಜಾವ ಸರಿ ಸುಮಾರು ಎರಡು ಗಂಟೆಯ ವೇಳೆಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಸ್ಥಳೀಯರು ಕೂಡಲೇ ಅಗ್ನಿಶಾಮಕದಳದ ಸಿಬ್ಬಂದಿಗಳಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿಗಳು ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಯ ತೀವ್ರತೆ ಹೆಚ್ಚಾದಲ್ಲಿ ಪಕ್ಕದಲ್ಲೇ ಇದ್ದ ಬಿಇಒ ಕಛೇರಿಗೂ ಬೆಂಕಿ ತಗಲುವ ಸಂಭವವಿತ್ತು ಆದರೆ ತಕ್ಷಣವೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿಗಳು ಯಾವುದೇ ದುರ್ಘಟನೆ ಸಂಭವಿಸದಂತೆ ಕ್ಷಿಪ್ರವಾಗಿ ಬೆಂಕಿ ನಂದಿಸಿದ್ದಾರೆ.
ಮನೆಯಲ್ಲಿದ್ದ ಕೆಲ ವಸ್ತುಗಳು ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಗಳು ಸಂಭವಿಸಿಲ್ಲ. ಅಗ್ನಿ ನಂದಿಸುವ ಕಾರ್ಯದಲ್ಲಿ ಪ್ರಭಾರ ಠಾಣಾಧಿಕಾರಿ ಎಸ್.ಜಿ ಗೋವಿಂದ್ ನಾಯ್ಕ್, ರಮೇಶ್, ದೇವೇಂದ್ರ ರಾಥೋಡ್, ಪುನೀತ್, ಕಲ್ಲೇಶ್ ನಾಯ್ಕ್, ಗೃಹರಕ್ಷಕರಾದ ಸುಂದರೇಶ್ ಹಾಗೂ ಸುಧಾಕರ್ ಇದ್ದರು.

0 Comments