ಕೊಟ್ಟಿಗೆಹಾರ : (ನ್ಯೂಸ್ ಮಲ್ನಾಡ್ ವರದಿ) ಬಸ್ ಒಂದಕ್ಕೆ ಬೆಂಕಿ ತಗುಲಿ ಬಸ್ಸಿನ ಮುಂಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ ನಲ್ಲಿ ರಾತ್ರಿಯ ವೇಳೆ ಈ ಅಗ್ನಿ ಅವಘಡ ಸಂಭವಿಸಿದೆ ನಿಲ್ಲಿಸಿದ್ದ ಬಸ್ಸಿಗೆ ಇದ್ದಕ್ಕಿದ್ದಂತೆ ಬೆಂಕಿ ತಗುಲಿದೆ. ಸ್ಥಳದಲ್ಲೇ ಇದ್ದ ಪೆಟ್ರೋಲ್ ಬಂಕ್ ನ ಕೆಲಸಗಾರನ ಜಾಗರೂಕತೆಯಿಂದಾಗಿ ಮುಂದೆ ಸಂಭವಿಸುತ್ತಿದ್ದ ದೊಡ್ಡ ಅವಘಡವೊಂದು ತಪ್ಪಿದೆ.

ತಕ್ಷಣವೇ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗಳು ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ.
ತನು ಕೊಟ್ಟಿಗೆಹಾರ, ವರದಿಗಾರರು.