ಕೊಪ್ಪ : (ನ್ಯೂಸ್ ಮಲ್ನಾಡ್ ವರದಿ) ಎಲ್ಲೆಡೆ ವ್ಯಾಪಕವಾಗಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಜನವರಿಯಲ್ಲಿ ನಡೆಯಬೇಕಿದ್ದ ಉದ್ಯೋಗ ಮೇಳವನ್ನು ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರದಲ್ಲಿ ನಡೆಸುವುದಾಗಿ ಅಮ್ಮ ಫೌಂಡೇಶನ್ ಸಂಸ್ಥಾಪಕ ಸುಧಾಕರ್ ಎಸ್ ಶೆಟ್ಟಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು ಪ್ರಸ್ತುತ ರಾಜ್ಯದಾದ್ಯಂತ ಕೋವಿಡ್ ನಿಯಮಾವಳಿಗಳು ಜಾರಿಯಲ್ಲಿರುವುದರಿಂದ ಸಭೆ ಹಾಗೂ ಸಮಾರಂಭಗಳಿಗೆ ನಿಷೇಧ ಹೇರಲಾಗಿದೆ, ಈ ಸಂದರ್ಭದಲ್ಲಿ ನಮ್ಮ ನಿರೀಕ್ಷೆಯಂತೆ 40 ಕಂಪನಿಗಳ ನೇಮಕಾತಿ ನಡೆಸುವ ಅಧಿಕಾರಿಗಳು ಬರಲು ಅನಾನುಕೂಲವಾಗುತ್ತದೆ ಹಾಗೂ ಈ ಸಂದರ್ಭ ಸೂಕ್ತವಲ್ಲದ ಕಾರಣ ಮುಂಬರುವ ದಿನಗಳಲ್ಲಿ ಕೊಪ್ಪ ಹಾಗೂ ಶೃಂಗೇರಿ ಕ್ಷೇತ್ರದ ಪದವೀಧರರಿಗೆ ಹಾಗೂ ನಿರುದ್ಯೋಗಿಗಳಿಗೆ ಅಗತ್ಯವಾಗಿ ಉದ್ಯೋಗ ನೀಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ :

ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ ಕಾಮುಕ


ಉದ್ಯೋಗ ಮೇಳದ ಸಲುವಾಗಿ ನಿರ್ಮಲಾನಂದ ಸ್ವಾಮೀಜಿಗಳೊಡನೆ ಸವಿಸ್ತಾರವಾಗಿ ಚರ್ಚಿಸಲಾಗಿದ್ದು ಹಾಗೂ ಅದರ ಸಲುವಾಗಿ ಹಲವಾರು ನಿರ್ಣಯಗಳನ್ನು ಕೈಗೊಳ್ಳಲಾಗಿತ್ತು ಆದರೆ ಪ್ರಸ್ತುತ ಕೋವಿಡ್ ಹೆಚ್ಚಿರುವ ಕಾರಣ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ಮುಂಬರುವ ದಿನಗಳಲ್ಲಿ ಹಲವಾರು ಕಂಪನಿಗಳ ಹಾಗೂ ಕಾರ್ಖಾನೆಗಳ ಅಧಿಕಾರಿಗಳನ್ನು ಕರೆಸಿ ಇಲ್ಲಿನ ಉದ್ಯೋಗಾಕಾಂಕ್ಷಿಗಳಿಗೆ ನಿರುದ್ಯೋಗಿಗಳಿಗೆ ಪೂರಕವಾದ ಉದ್ಯೋಗ ನೀಡಲಾಗುತ್ತದೆ ಎಂದರು.