ಮೂಡಿಗೆರೆ : (ನ್ಯೂಸ್ ಮಲ್ನಾಡ್ ವರದಿ) ನೇಣು ಬಿಗಿದುಕೊಂಡು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗುತ್ತಿ ಹಳ್ಳಿ ಅಣ್ಣಪ್ಪ ಎಂಬ 42 ವರ್ಷ ಪ್ರಾಯದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಣ್ಣಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಜೀವನದಲ್ಲಿ ಜಿಗುಪ್ಸೆ ಉಂಟಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಈ ಕುರಿತು ಮೂಡಿಗೆರೆಯ ಬಣಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ತನು ಕೊಟ್ಟಿಗೆ ಹಾರ, ವರದಿಗಾರರು.

0 Comments