ಕೊಪ್ಪ : (ನ್ಯೂಸ್ ಮಲ್ನಾಡ್ ವರದಿ) ಮಲೆನಾಡು ಭಾಗದ ಕೊಪ್ಪ ಕಾಲೇಜಿನಲ್ಲಿ ವಿವಾದ ಉಂಟುಮಾಡಿದ್ದ ಕೇಸರಿ ಶಲ್ಯ ಹಾಗೂ ಸ್ಕಾರ್ಫ್ ವಿವಾದವು ಇಂದು ನಡೆದ ಪೋಷಕರ ಸಭೆಯಲ್ಲಿ ಸುಖಾಂತ್ಯ ಕಂಡಿದೆ.

ಜಿಲ್ಲೆಯ ಇಂದಿನ ಕೊರೋನ ಪ್ರಕರಣಗಳ ಸಂಪೂರ್ಣ ಮಾಹಿತಿ : ಚಿಕ್ಕಮಗಳೂರು ಜಿಲ್ಲೆಯ ಇಂದಿನ ಕೊರೋನ ಪ್ರಕರಣಗಳ ಸಂಪೂರ್ಣ ವರದಿ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಂಟಾಗಿದ್ದ ಕೇಸರಿ ಶಲ್ಯ ಹಾಗೂ ಸ್ಕಾರ್ಫ್ ವಿವಾದವು ಪೋಷಕರ ಸಭೆಯ ಮೂಲಕ ಇಂದು ಅಂತ್ಯ ಕಂಡಿತು ಶಾಸಕರ ಸಮ್ಮುಖದಲ್ಲಿ ನಡೆದ ಈ ಸಭೆಯಲ್ಲಿ ತರಗತಿಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸುವಂತಿಲ್ಲ ಕೇವಲ ವೇಲ್ ಅನ್ನು ತಲೆಯ ಮೇಲೆ ಹಾಕಿಕೊಳ್ಳಲು ಸೂಚಿಸಲಾಗಿದೆ ಪಿನ್ ಬಳಸಿ ಸುತ್ತಿ ಕೊಳ್ಳುವಂತಿಲ್ಲ ಎಂದು ಸಭೆಯಲ್ಲಿ ಪ್ರಾಂಶುಪಾಲರು ಸ್ಪಷ್ಟಪಡಿಸಿದರು.

ಈ ಹಿಂದೆ 2018 ರಲ್ಲಿ ಈ ಸಮಸ್ಯೆ ಉಂಟಾದಾಗ ಇದೇ ನಿರ್ಣಯವನ್ನು ಕೈಗೊಳ್ಳಲಾಗಿತ್ತು ಅಂತೆಯೇ ಈಗಲೂ ಪೋಷಕರ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಇದಕ್ಕೆ ಎಲ್ಲರೂ ತಲೆ ಬಾಗಲೇಬೇಕು ಒಂದು ವೇಳೆ ನಿಯಮಗಳನ್ನು ಪಾಲಿಸದೇ ಹೋದಲ್ಲಿ ಅಂತಹವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು.

ಈ ಸಭೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಟಿ ಡಿ ರಾಜೇಗೌಡ ವಿದ್ಯಾರ್ಥಿಗಳು ಅತ್ಯಂತ ಸಂಯಮದಿಂದ ವರ್ತಿಸಬೇಕು ಕಾಲೇಜಿನಲ್ಲಿ ಸರ್ವರೂ ಒಂದೇ ಈ ರೀತಿಯ ಘಟನೆಗಳು ಕಾಲೇಜಿನಲ್ಲಿ ಮರುಕಳಿಸದಂತೆ ನೋಡಿಕೊಳ್ಳಬೇಕು ಹಾಗೂ ಈ ನಿಯಮಾವಳಿಗಳಿಗೆ ಎಲ್ಲರೂ ಬದ್ಧರಾಗಿ ಸಮಾಜಕ್ಕೆ ಉತ್ತಮ ವ್ಯಕ್ತಿಗಳಾಗಿ ಹೊರಹೊಮ್ಮಬೇಕು ಎಂದರು.

ಈ ಸಭೆಯಲ್ಲಿ ಕಾಲೇಜಿನ ಪ್ರಾಂಶುಪಾಲರು, ಕಾಲೇಜು ಮಂಡಳಿಯ ಸದಸ್ಯರು, ಶಾಸಕ ಟಿ.ಡಿ ರಾಜೇಗೌಡ, ಪೋಷಕರು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.