ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿಯ ಗ್ರಾಮಾಂತರ ಭಾಗದಲ್ಲಿ ಅಗ್ನಿ ಅವಘಡ ಉಂಟಾಗಿ ಹುಲ್ಲು ತುಂಬಿದ್ದ ಲಾರಿ ಉರಿದಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಕ್ರೆ ಸಮೀಪದ ಜೈನಮಕ್ಕಿ ಎಂಬಲ್ಲಿ ಒಣಹುಲ್ಲು ತುಂಬಿದ್ದ ಲಾರಿಗೆ ಬೆಂಕಿ ತಗುಲಿದ ಪರಿಣಾಮ ಲಾರಿಯಲ್ಲಿದ್ದ ಒಣಹುಲ್ಲು ಸಂಪೂರ್ಣವಾಗಿ ಸುಟ್ಟು ನಾಶವಾಗಿದೆ. ಕಿಕ್ರೆ ಜೈನಮಕ್ಕಿ ಸಮೀಪದಲ್ಲಿ ಈ ಘಟನೆ ಸಂಭವಿಸಿದ್ದು ಯಾರಿಗೂ ಕೂಡ ಯಾವುದೇ ಅಪಾಯಗಳು ಸಂಭವಿಸಿಲ್ಲ.
ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಅಗ್ನಿಶಮನ ಕಾರ್ಯವನ್ನು ನಡೆಸಿದ್ದಾರೆ ಹಾಗೂ ಸಂಪೂರ್ಣವಾಗಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ಶೃಂಗೇರಿ ಅಗ್ನಿಶಾಮಕದಳದ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗದವರು ಪಾಲ್ಗೊಂಡಿದ್ದರು.

0 Comments