ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ವಿದ್ಯಾರ್ಥಿಗಳಲ್ಲಿ ಹಾಗೂ ಕಾಲೇಜಿನ ಕೆಲ ಸಿಬ್ಬಂದಿಗಳಿಗೆ ಕೊರೋನ ಸೋಂಕು ಧೃಢಪಟ್ಟ ಹಿನ್ನೆಲೆ ಕುವೆಂಪು ವಿಶ್ವ ವಿದ್ಯಾಲಯದ ಕ್ಯಾಂಪಸ್ ನ್ನು ಕೆಲ ದಿನಗಳತನಕ ಮುಚ್ಚಲಾಗಿದೆ.
ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಐವರು ಸಿಬ್ಬಂದಿಗಳಿಗೆ ಕೊರೋನ ಸೋಂಕು ಧೃಡಪಟ್ಟಿತ್ತು ನಂತರದಲ್ಲಿ ಪ್ರಾಥಮಿಕ ಸಂಪರ್ಕದಲ್ಲಿದ್ದ ಅನೇಕರನ್ನು ಪರೀಕ್ಷೆ ಮಾಡಿದಾಗ ಅವರಲ್ಲೂ ಸೋಂಕು ಧೃಢಪಟ್ಟಿದೆ ಈ ಹಿನ್ನೆಲೆ ಕುವೆಂಪು ವಿಶ್ವ ವಿದ್ಯಾಲಯದ ಸಹ್ಯಾದ್ರಿ ಕ್ಯಾಂಪಸ್ ಬಂದ್ ಮಾಡಲಾಗಿದೆ. ಹಾಗೂ ಐದು ದಿನಗಳ ಕಾಲ ತರಗತಿಗಳನ್ನು ನಡೆಸದೇ ಇರುವಂತೆ ಸೂಚನೆ ನೀಡಲಾಗಿದೆ.
ಈ ಸಮಯದಲ್ಲಿ ಅವಶ್ಯವಿದ್ದರೆ ಆನ್ಲೈನ್ ತರಗತಿಗಳನ್ನು ಮಾಡುವಂತೆ ಶಿಕ್ಷಕರಿಗೆ ಸೂಚಿಸಲಾಗಿದೆ. ಆದರೆ ಸೋಂಕನ್ನು ನಿಯಂತ್ರಣ ಮಾಡುವ ಸಲುವಾಗಿ ಬಾಹ್ಯ ತರಗತಿಗಳು ನಡೆಯುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.
ಪ್ರಸ್ತುತ ಸೋಂಕಿಗೆ ತುತ್ತಾಗಿರುವ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹೋಂ ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

0 Comments