ಹಾಸನ : (ನ್ಯೂಸ್ ಮಲ್ನಾಡ್ ವರದಿ)  ಯುವತಿಯನ್ನು ಓರ್ವ ಕಾರ್ಮಿಕ ಚುಡಾಯಿಸಿದ್ದಾನೆ ಎಂದು ಆರೋಪಿಸಿ ಕೆಲವರು ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಹಾಸನದಲ್ಲಿ ಬೆಳಕಿಗೆ ಬಂದಿದೆ.

ಮೇಘರಾಜ್ ಎಂಬ ಗಾರೆ ಕೆಲಸ ಮಾಡುವ ವ್ಯಕ್ತಿಯು ಯುವತಿಯೋರ್ವಳಿಗೆ ಚುಡಾಯಿಸಿದ್ದಾನೆಂದು ಆರೋಪಿಸಿ ಕೆಲ ಜನರು ವಿವಸ್ತ್ರಗೊಳಿಸಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆಯ ನಂತರ ಸಾರ್ವಜನಿಕರು ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ.

ತಪ್ಪೆಸಗಿದವರಿಗೆ ಶಿಕ್ಷೆಯಾಗಬೇಕು ಆದರೆ ನೈತಿಕ ಪೊಲೀಸ್ ಗಿರಿ ನಡೆಸುವುದು ಸರಿಯಲ್ಲ ಶಿಕ್ಷೆ ಕೊಡುವುದಕ್ಕೆ ಕಾನೂನಿದೆ ಈ ರೀತಿಯಾಗಿ ಸಾರ್ವಜನಿಕ ಸ್ಥಳಗಳಲ್ಲಿ ಹಲ್ಲೆ ನಡೆಸುವುದು ಸರಿಯಲ್ಲ ಅಲ್ಲದೇ ಈ ಘಟನೆಯು ಸಮಾಜಕ್ಕೆ ಬೇರೆ ರೀತಿಯ ಸಂದೇಶಗಳನ್ನು ನೀಡುತ್ತದೆ ಕೂಡಲೇ ಪೊಲೀಸರು ನೈತಿಕ ಪೊಲೀಸ್ ಗಿರಿ ನಡೆಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಈ ಸಂಬಂಧ ಓರ್ವನ ಮೇಲೆ ದೂರು ದಾಖಲಾಗಿದ್ದು ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ. ಘಟನೆಯ ಕುರಿತಾದ ಸಂಪೂರ್ಣ ವಿವರಗಳು ಇನ್ನಷ್ಟೇ ತಿಳಿಯಬೇಕಿದೆ.