ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ತಹಸೀಲ್ದಾರ್ ವಾಹನದ ಚಾಲಕ ವಿಜೇತ್ ಆತ್ಮಹತ್ಯೆಗೆ ಶರಣಾದ ಘಟನೆಯ ನಂತರ ಪರಿಹಾರಕ್ಕಾಗಿ ಆಗ್ರಹಿಸಿ ಹಾಗೂ ಅಧಿಕಾರಿಗಳ ತಲೆದಂಡಕ್ಕೆ ಆಗ್ರಹಿಸಿ ಶೃಂಗೇರಿಯ ಸಾರ್ವಜನಿಕರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ತಹಸೀಲ್ದಾರ್ ವಾಹನದ ಚಾಲಕ ವಿಜೇತ್ ಹೆಗ್ತೂರು ನಿನ್ನೆ ತಮ್ಮ ಮನೆಯ ಸಮೀಪದ ತೋಟದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಅತ್ಯಂತ ಸಜ್ಜನ ಹಾಗೂ ಎಲ್ಲರಿಗೂ ಅಚ್ಚು ಮೆಚ್ಚಾಗಿದ್ದ ಯುವಕನನ್ನು ಕೆಳೆದುಕೊಂಡ ಸಂಬಂಧಿಕರು ಹಾಗೂ ಶೃಂಗೇರಿಯ ಜನತೆ ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
ಇದನ್ನೂ ಓದಿ : ಶೃಂಗೇರಿ ತಹಸೀಲ್ದಾರ್ ಕಾರು ಚಾಲಕನ ಆತ್ಮಹತ್ಯೆ ಪ್ರಕರಣ : ಪ್ರಥಮ ದರ್ಜೆ ಸಹಾಯಕ ಶರತ್ ಸೇರಿ ಮೂವರು ವಶಕ್ಕೆ
ಶೃಂಗೇರಿಯ ಶಂಕರಾಚಾರ್ಯ ವೃತ್ತದ ಬಳಿ ರಸ್ತೆ ತಡೆ ನಡೆಸಿರುವ ಶೃಂಗೇರಿಯ ಸಾರ್ವಜನಿಕರು ಯಾವುದೇ ವಾಹನಗಳು ಸಂಚಾರ ಮಾಡದಂತೆ ತಡೆಯೊಡ್ಡಿದ್ದಾರೆ. ಪರಿಸ್ಥಿತಿ ಕ್ಷಣದಿಂದ ಕ್ಷಣಕ್ಕೆ ಬಿಗಡಾಯಿಸುತ್ತಿದ್ದು ಅಧಿಕಾರಿಗಳು ಜನರ ಮನವೊಲಿಸಲು ಅಶಕ್ಯರಗಿದ್ದಾರೆ. ನೊಂದ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಭ್ರಷ್ಟಾಚಾರ ನಡೆಸಿದ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.

0 Comments