ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಶಾಲಾ ವಿದ್ಯಾರ್ಥಿನಿಯೋರ್ವಳ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ.

ಶಿವಮೊಗ್ಗ ಜಿಲ್ಲೆಯ  ಭದ್ರಾವತಿಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಭದ್ರಾವತಿ ಸಮೀಪದ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ 28 ವರ್ಷ ವಯಸ್ಸಿನ ಉಮೇಶ್ ಅಪ್ರಾಪ್ತ ಶಾಲಾ ಬಾಲಕಿಯನ್ನು ಪುಸಲಾಯಿಸಿ ಭದ್ರಾವತಿಯಿಂದ  ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ಲಾಡ್ಜ್ ಒಂದಕ್ಕೆ ಕರೆತಂದು ಅಲ್ಲಿ ಅತ್ಯಾಚಾರ ಎಸಗಿದ್ದಾನೆ, ಹಾಗೂ ಈ ಕುರಿತು ಯಾರಿಗಾದರೂ ಹೇಳಿದಲ್ಲಿ ಕೊಲೆ ಮಾಡುವುದಾಗಿ ಬೆದರಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಅತ್ಯಾಚಾರಕ್ಕೊಳಗಾದ ಯುವತಿಯು ಅದೇ ಹೋಟೆಲಿನಲ್ಲಿ ಕೆಲಸ ಮಾಡುತ್ತಿದ್ದ ಓರ್ವ ಮಹಿಳೆಯ ಮಗಳಾಗಿದ್ದಳು. ಮುಂಚೆಯೇ ಪರಿಚಯ ಹೊಂದಿದ್ದ ಉಮೇಶ್ ಆಕೆಯನ್ನು ಪುಸಲಾಯಿಸಿ ಈ ಕೃತ್ಯ ಎಸಗಿದ್ದಾನೆ.

ಇದನ್ನೂ ಓದಿ :

ಶೃಂಗೇರಿ ಹಕ್ಕುಪತ್ರ ಹಗರಣ : ಇಬ್ಬರು ಗ್ರಾಮ ಲೆಕ್ಕಾಧಿಕಾರಿಗಳು, ಓರ್ವ ರಾಜಸ್ವ ನಿರೀಕ್ಷಕ ಸಸ್ಪೆಂಡ್

ಘಟನೆಯ ಸಂಬಂಧ ಶಿವಮೊಗ್ಗ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪೋಕ್ಸೋ ಕಾಯ್ದೆ ಅಡಿ ತನಿಖೆ ನಡೆಸುತ್ತಿದ್ದಾರೆ.