ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದಾನೆ. 

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಬೆಳಸೆ ಖಾಂಡ್ಯ ಕ್ಲಬ್ ಬಳಿ ಬೈಕ್ ಹಾಗೂ ಬಸ್ಸಿನ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. 

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಇನೋವಾ ಕಾರು

ಚಿಕ್ಕಮಗಳೂರಿನಿಂದ ಶೃಂಗೇರಿ ಕಡೆಗೆ ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಬೈಕಿನ ನಡುವೆ ಈ ಅಪಘಾತ ಉಂಟಾದ ಪರಿಣಾಮ ಕೆಲ ಸಮಯ ರಸ್ತೆ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಪೊಲೀಸರು ಈ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.