ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗದ ಭದ್ರಾವತಿ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ರಸ್ತೆಯಲ್ಲಿ ರಸ್ತೆ ವಿಭಜಕವನ್ನು ದಾಟಿ ರಭಸದಿಂದ ಬಂದ ಲಾರಿಯು ಕಾರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದ ಕಡೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಅನ್ನು ಒಡೆದು ಎದುರುಗಡೆ ಬರುತ್ತಿದ್ದ ಕಾರಿಗೆ ಗುದ್ದಿದೆ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.
ಅತೀ ವೇಗದ ಚಾಲನೆಯೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ, ಘಟನಾ ಸ್ಥಳಕ್ಕೆ ಭದ್ರಾವತಿ ಸಂಚಾರಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಅಮಾನವೀಯ ರೀತಿಯಲ್ಲಿ 26 ಜಾನುವಾರುಗಳನ್ನು ತುಂಬಿದ್ದ ಲಾರಿ ಪತ್ತೆ ; ಸ್ಥಳದಿಂದ ಚಾಲಕ ಎಸ್ಕೇಪ್
ಮೃತಪಟ್ಟವರನ್ನು ರಾಮಚಂದ್ರ ಹಾಗೂ ಷಣ್ಮುಖ ಎಂದು ಗುರುತಿಸಲಾಗಿದೆ. ಅಪಘಾತ ಹೊಂದಿದ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ ಲಾರಿಯ ಅತೀ ವೇಗದ ಚಾಲನೆಯಿಂದ ಅಪಘಾತ ಉಂಟಾಗಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

0 Comments