ಕಡೂರು : (ನ್ಯೂಸ್ ಮಲ್ನಾಡ್ ವರದಿ) ಲಾರಿ ಚಾಲಕನನ್ನು ಬೆದರಿಸಿ ಹಣ ವಸೂಲಿ ಮಾಡಿದ್ದ ಆರೋಪಿಗಳನ್ನು ಕಡೂರು ಪೊಲೀಸರು ಭೇದಿಸಿ ಬಂಧಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಾಣಾವರ ಕಡೂರು ರಸ್ತೆಯಲ್ಲಿ ಲಾರಿಯನ್ನು ಬದಿಗೆ ನಿಲ್ಲಿಸಿ ಮಲಗಿದ್ದ ಲಾರಿ ಚಾಲಕನನ್ನು ಬೆದರಿಸಿ ಆತನ ಬಳಿಯಿದ್ದ ಲಾರಿ ಬಾಡಿಗೆ ಹಣ ಮತ್ತು ಆತನ ಮೊಬೈಲ್ ಫೋನನ್ನು ಆರೋಪಿಗಳು ಕಿತ್ತುಕೊಂಡು ಹೋಗಿದ್ದರು. 

ಪ್ರಕರಣವನ್ನು ಬೆನ್ನಟ್ಟಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಣ ಹಾಗೂ ಮೊಬೈಲ್ ಕಿತ್ತುಕೊಂಡು ಹೋಗಿದ್ದ ಮೂವರು ಆರೋಪಿಗಳನ್ನು ಕಡೂರು ಸಿಪಿಐ ನೇತೃತ್ವದ ಪೊಲೀಸರ ತಂಡ ಬಂಧಿಸಿದ್ದಾರೆ. ಬಂಧಿತರಿಂದ ಚಾಕು, ಮೊಬೈಲ್ ಫೋನ್, ಹಣ ಹಾಗೂ ಬೈಕ್ ಅನ್ನು ಪೋಲಿಸರು ವಶಪಡಿಸಿ ಕೊಂಡಿದ್ದಾರೆ. ಸಾರ್ವಜನಿಕರು ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳು ಈ ಕುರಿತು ಪೊಲೀಸರಿಗೆ ಅಭಿನಂದಿಸಿದ್ದಾರೆ. 

ಇದನ್ನೂ ಓದಿ : ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಶಿಕ್ಷಕನನ್ನು ಬಂಧಿಸಿದ ಪೊಲೀಸರು : ಒಟ್ಟು 11 ಕೇಸ್ ದಾಖಲು