ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಜೆಡಿಎಸ್ ಪಕ್ಷದ ರಾಜ್ಯದ ಕೋರ್ ಕಮಿಟಿ ಸದಸ್ಯರಾಗಿ ಶೃಂಗೇರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಉದ್ಯಮಿ ಸುಧಾಕರ್ ಎಸ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ ಎಂದು ಜೆಡಿಎಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಮುಂಬರುವ ವಿಧಾನಸಭಾ ಚುನಾವಣೆಗೆ ಸುಧಾಕರ್ ಎಸ್ ಶೆಟ್ಟಿ ರವರು ಸ್ಪರ್ಧೆನಡೆಸಲಿದ್ದಾರೆ ಹಾಗೂ ಅವರು ಗಣರಾಜ್ಯೋತ್ಸವದ ದಿನದಂದು ಮಾಜಿ ಸಚಿವ ಬಂಡೆಪ್ಪ ಕಾಶಪ್ಪರವರ ನೇತೃತ್ವದಲ್ಲಿ ರಚಿಸಲ್ಪಟ್ಟ ಜೆಡಿಎಸ್ ಕೋರ್ ಕಮಿಟಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ. 

ಇದನ್ನೂ ಓದಿ : ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

ಮುಂಬರುವ ಎಲ್ಲಾ ಚುನಾವಣೆಗಳ ದೃಷ್ಟಿಯಿಂದಾಗಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ನಾಯಕರುಗಳಿಂದ ನಿರ್ಮಿತವಾಗಿರುವ ಈ ಕಮಿಟಿಯು ಮುಂಬರುವ ಎಲ್ಲಾ ಅಡೆ ತಡೆಗಳನ್ನು ಸರಿದೂಗಿಸಿ ಮತ್ತೊಮ್ಮೆ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯ ನಿರ್ವಹಿಸುತ್ತದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.