ಹಾಸನ : (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಜೂಜಾಟ ನಡೆಸುತ್ತಿದ್ದ ಜೂಜು ಕೋರರನ್ನು ಪೊಲೀಸರು ಕಾರ್ಯಾಚರಣೆಯ ಮೂಲಕ ಬಂಧಿಸಿದ್ದಾರೆ.

ಹಾಸನ ಜಿಲ್ಲೆಯ ವಿವಿಧ ಭಾಗಗಳಲ್ಲಿ ಜೂಜಾಟ ಆಡುತ್ತಿದ್ದವರನ್ನು ಹಣದ ಸಮೇತ ಪೊಲೀಸರು ಬಂಧಿಸಿದ್ದಾರೆ. ಹಾಸನದ ಚನ್ನರಾಯಪಟ್ಟಣ ಹಾಗೂ ಅರಸೀಕೆರೆಯ ಕೆಲ ಕ್ಲಬ್ ನಲ್ಲಿ ಅಕ್ರಮವಾಗಿ ಜೂಜಾಟ ನಡೆಸುತ್ತಿದ್ದ ಇಪ್ಪತ್ತು ಜನ ಆರೋಪಿಗಳನ್ನು ಬಂಧಿಸಿ ಬಂಧಿತರಿಂದ ಅರವತ್ತು ಸಾವಿರ ಮೌಲ್ಯದ ನಗದನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಜೂಜಾಟ ನಡೆಸುವುದು ಕಾನೂನು ಬಾಹಿರವಾಗಿದೆ ಹಣ ಕಳೆದುಕೊಳ್ಳುವ ಈ ರೀತಿಯ ಅಕ್ರಮ ಚಟುವಟಿಕೆಗಳು ಬಾರದಂತೆ ಜಿಲ್ಲೆಯಾದ್ಯಂತ ನಿಗಾ ವಹಿಸಲಾಗಿದೆ. ಯಾರಾದರೂ ಜೂಜಾಟ ನಡೆಸುವುದು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ಕಾಫಿನಾಡಿನಲ್ಲಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಬೈಕ್ ಸವಾರ ದುರ್ಮರಣ

ಈ ಅಕ್ರಮ ಜೂಜಾಟಕ್ಕೆ ಸಂಬಂಧಪಟ್ಟಂತೆ ಜಿಲ್ಲೆಯ ಹಲವೆಡೆ ದಾಳಿ ನಡೆಸಿ ಇಪ್ಪತ್ತು ಜನರನ್ನು ಬಂಧಿಸಲಾಗಿದೆ ಹಾಗೂ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.