ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಮನೆಯಲ್ಲಿ ಅಕ್ರಮವಾಗಿ ಸಂಗ್ರಹ ಮಾಡಲಾಗಿದ್ದ ಅಪಾರ ಮೌಲ್ಯದ ಶ್ರೀ ಗಂಧದ ತುಂಡುಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯ ಮೂಲಕ ವಶ ಪಡೆದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಹೋಬಳಿಯ ಹೊಂಡಲಗದ್ದೆ ತಿಮ್ಮಪ್ಪ ಎಂಬುವವರ ಮನೆಯಲ್ಲಿ ಅಕ್ರಮವಾಗಿ ಸಂಗ್ರಹ ಮಾಡಲಾಗಿದ್ದ ಸುಮಾರು 60 ಕೆಜಿ ತೂಕದ ಶ್ರೀ ಗಂಧದ ತುಂಡುಗಳನ್ನು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯ ಮೂಲಕ ವಶಪಡೆದಿದ್ದಾರೆ. 

ಇದನ್ನೂ ಓದಿ :

ಲಂಚ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದ ಶಿರಸ್ತೇದಾರ್

ಈ ಕುರಿತಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಸಂಪೂರ್ಣ ತನಿಖೆಯ ನಂತರ ಈ ಕುರಿತು ಮಾಹಿತಿ ಲಭ್ಯವಾಗಲಿದೆ. ಈ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿಗಳಾದ ಸಂಜಯ್, ಮಧುಕರ್, ಯುವರಾಜ್,ಅಶೋಕ್,ಸುಮಾ,ವಸಂತ್,ಮೌನೇಶ್ ಭಾಗವಹಿಸಿ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ್ದಾರೆ.