ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಖಚಿತ ಮಾಹಿತಿಯನ್ನು ಆಧರಿಸಿ ಚಿಕ್ಕಮಗಳೂರು ನಗರದ ವಿಜಯಪುರದ ದೇವಸ್ಥಾನವೊಂದರ ಸಮೀಪದ ಬಾಡಿಗೆ ಮನೆಯಲ್ಲಿ ಈ ಕೃತ್ಯವನ್ನು ಹಣಗಳಿಸುವ ಉದ್ದೇಶದಿಂದ ಇಬ್ಬರು ವ್ಯಕ್ತಿಗಳು ಮಹಿಳೆಯರನ್ನು ಕರೆಸಿ ದಂಧೆ ನಡೆಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ : ಕಾಫಿ ತೋಟದಲ್ಲಿ ಕಂಡ ಹುಲಿ ; ಕಂಗಾಲಾದ ಸ್ಥಳೀಯರು
ಮೂವರು ಆರೋಪಿಗಳು ಎಸ್ಕೇಪ್ ಆಗಿದ್ದು ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಈ ಕುರಿತು ಚಿಕ್ಕಮಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೂವರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಹಾಗೂ ಆರೋಪಿಗಳ ಮೇಲೆ ಕೇಸ್ ದಾಖಲಿಸಿದ್ದಾರೆ ಹಾಗೂ ಇಬ್ಬರು ಮಹಿಳೆಯರ ರಕ್ಷಣೆ ಮಾಡಿದ್ದಾರೆ.

0 Comments