ಹರಿಹರಪುರ : (ನ್ಯೂಸ್ ಮಲ್ನಾಡ್ ವರದಿ) ತಡರಾತ್ರಿ ಕಾರಿನ ಟೈರ್ ಸ್ಫೋಟ ಹೊಂದಿದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಾರಿನಲ್ಲಿ ಒಟ್ಟು ನಾಲ್ವರು ಪ್ರಯಾಣಿಕರು ಸಂಚಾರ ನಡೆಸುತ್ತಿದ್ದರು ಅದರಲ್ಲಿ ಇಬ್ಬರು ಸಾವನ್ನಪ್ಪಿದ್ದರೆ ಇನ್ನಿಬ್ಬರು ಗಾಯಗೊಂಡಿದ್ದಾರೆ.
ಸಾವನ್ನಪ್ಪಿದವರನ್ನು ಆಲ್ದೂರು ಮಣಿಕಂಠ ಹಾಗೂ ಕೊಪ್ಪದ ಹೆಸರಾಂತ ಮೆಡಿಕಲ್ ನ ಮಾಲೀಕರಾದ ರಾಜಶೇಖರ ಎಂದು ಗುರುತಿಸಲಾಗಿದೆ. ಈ ಕುರಿತು ಹರಿಹರಪುರ ಪೊಲೀಸ್ ಠಾಣಾ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿ ಘಟನೆಗೆ ನಿಖರ ಕಾರಣಗಳೇನು ಎಂದು ತನಿಖೆ ನಡೆಸುತ್ತಿದ್ದಾರೆ.

0 Comments