ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ದಿನ ಕಳೆದಂತೆ ರಾಜ್ಯಾದ್ಯಂತ ಕೊರೋನ ಪ್ರಕರಣಗಳು ಹೆಚ್ಚುತ್ತಿದ್ದು ಶಿವಮೊಗ್ಗ ಜಿಲ್ಲೆಯಲ್ಲೂ ಹೆಚ್ಚಿನ ಕೊರೋನ ಪ್ರಕರಣಗಳು ದಾಖಲಾಗಿದೆ ಹಾಗೂ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. 

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನ ಸೋಂಕಿನ ಮೂರನೇ ಅಲೆಗೆ ಮೊದಲ ಬಲಿಯಾಗಿದೆ. ಈ ಹಿಂದಿನ ಎರಡೂ ಅಲೆಗಳ ಸಂದರ್ಭದಲ್ಲಿ  ಅನೇಕರು ಸೋಂಕಿಗೆ ಬಲಿಯಾಗಿದ್ದರು. ಪ್ರಸ್ತುತ ಕೊರೋನ ವೈರಸ್ ಮೂರನೇ ಅಲೆಗೆ ಮೊದಲ ಬಲಿಯಾಗಿದೆ. 

ಸೋಂಕನ್ನು ತಡೆಗಟ್ಟುವ ಸಲುವಾಗಿ ಈಗಾಗಲೇ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಜನರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನುವಹಿಸಿ ಮುಂಬರುವ ದಿನಗಳಲ್ಲಿ ಕೊರೋನಾದಿಂದಾಗಿ ಯಾವುದೇ ರೀತಿಯ ಸಮಸ್ಯೆಗಳು ಸಾರ್ವಜನಿಕರಿಗೆ ಉಂಟಾಗದಂತೆ ಕ್ರಮವಹಿಸಬೇಕೆಂದು  ಮನವಿ ಮಾಡಿದ್ದಾರೆ,ಹಾಗೂ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಸಲ್ಲಿಸಿದ್ದಾರೆ.