ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶೃಂಗೇರಿಯಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾದಲ್ಲಿ ಈ ದುರ್ಘಟನೆ ನಡೆದಿದೆ. ಕಿಗ್ಗಾ ವ್ಯಾಪ್ತಿಯ ಗಂಡಘಟ್ಟ ನಿವಾಸಿ ಚೇತನ್ ಎಂಬ ವ್ಯಕ್ತಿಯು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣಗಳೇನು ಎಂದು ಇನ್ನಷ್ಟೇ ತಿಳಿಯಬೇಕಿದೆ. ಮೃತಪಟ್ಟ ವ್ಯಕ್ತಿಯನ್ನು ಚೇತನ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಅಡಿಕೆ ಮರದಿಂದ ಕೆಳ ಬಿದ್ದು ಮೃತಪಟ್ಟ ವ್ಯಕ್ತಿ ; ಮುಗಿಲುಮುಟ್ಟಿದ ಸಂಬಂಧಿಕರ ಆಕ್ರಂದನ

ಈ ಕುರಿತು ಶೃಂಗೇರಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ ಹಾಗೂ ಘಟನೆಯ ಸಂಬಂಧ ಮಾಹಿತಿ ಕಲೆಹಾಕುತ್ತಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸಂಬಂಧಿಕರು ಹಾಗೂ ಊರಿನ ಜನರು ಈ ಘಟನೆಗೆ ಬೇಸರ ವ್ಯಕ್ತಪಡಿಸಿದ್ದಾರೆ.