ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿಯ ಸಂತೆ ಮಾರುಕಟ್ಟೆ ಸಮೀಪ ಭೀಕರ ಸರಣಿ ಅಪಘಾತ ಸಂಭವಿಸಿದ್ದು ಓರ್ವರು ಸಾವನ್ನಪ್ಪಿದ್ದು ಅನೇಕರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದ ಶಾರದಾ ನಗರ ಸಮೀಪದಲ್ಲಿರುವ ಸಂತೆ ಮಾರುಕಟ್ಟೆಯ ಬಳಿಯಲ್ಲಿ ಅಪಘಾತ ಸಂಭವಿಸಿದ್ದು ಅನೇಕರು ತೀವ್ರವಾಗಿ ಗಾಯಗೊಂಡಿದ್ದಾರೆ ಹಾಗೂ ಅನೇಕ ವಾಹನಗಳು ಜಖಂಗೊಂಡಿದೆ. ಕಟ್ಟೆಬಾಗಿಲು ಮುಖ್ಯ ರಸ್ತೆಯಿಂದ ವೆಲ್ಕಂ ಗೇಟ್ ಮಾರ್ಗವಾಗಿ ಕಾರು ಚಲಾಯಿಸಿಕೊಂಡು ಬರುತ್ತಿದ್ದಾತ ಅಜಾಗರೂಕತೆಯಿಂದ ಕಾರು ಚಲಾಯಿಸಿ ಹಲವಾರು ವಾಹನಗಳಿಗೆ ಗುದ್ದಿದ್ದಾನೆ. ಇದರಲ್ಲಿ ಓರ್ವರು ಸಾವನ್ನಪ್ಪಿದ್ದಾರೆ ಮೃತ ವ್ಯಕ್ತಿಯನ್ನು ಶೃಂಗೇರಿ ತಾಲೂಕಿನ ನೆಮ್ಮಾರು ಸಮೀಪದ ನಾಗೇಶ್ ಎಂದು ಗುರುತಿಸಲಾಗಿದೆ ಹಾಗೂ ಗಾಯಗೊಂಡವರನ್ನು ಶೃಂಗೇರಿ ನಿವಾಸಿ ಅಬ್ದುಲ್ ಸತ್ತಾರ್ ಹಾಗೂ ಕಾವಡಿ ಸಮೀಪದ ನಾಗರಾಜ್ ಎಂದು ಗುರುತಿಸಲಾಗಿದೆ.
ಗಾಯಗೊಂಡವರನ್ನು ಶೃಂಗೇರಿಯ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಶೃಂಗೇರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

0 Comments