ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ವ್ಯಕ್ತಿಯೋರ್ವನ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅನುಮಾನಾಸ್ಪದವಾಗಿ ಈ ಘಟನೆ ನಡೆದಿದೆ ಎಂದು ಮನೆಯವರು ದೂರು ನೀಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಹಾಗೂ ಶೃಂಗೇರಿ ತಾಲೂಕು ವ್ಯಾಪ್ತಿಗೆ ಒಳಪಡುವ ಬೇಗಾನೆ ಸಮೀಪದಲ್ಲಿ ಮಿಲಿಂದ್ ಎಂಬ ವ್ಯಕ್ತಿಯ ಶವ ಪತ್ತೆಯಾಗಿದೆ. ಈತ ಓರ್ವ ಮಾನಸಿಕ ಅಸ್ವಸ್ಥನಾಗಿದ್ದು, ಈ ಹಿಂದೆ ಶೃಂಗೇರಿಯ ಶಂಕರಾಚಾರ್ಯ ವೃತ್ತದಲ್ಲಿರುವ ಶಂಕರಾಚಾರ್ಯರ ವಿಗ್ರಹದ ಮೇಲೆ ಹಸಿರು ಧ್ವಜವನ್ನು ಹಾಕಿದ್ದ ಇದು ಬಹಳ ದೊಡ್ಡ ಮಟ್ಟದ ವಿವಾದಕ್ಕೂ ಕಾರಣವಾಗಿತ್ತು. ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಇದು ಕೊಲೆಯೋ ಅಥವಾ ಸಹಜ ಸಾವೋ ಎಂದು ಪೊಲೀಸರ ಸಮಗ್ರ ತನಿಖೆ ನಂತರವೇ ತಿಳಿಯಬೇಕಿದೆ. ಈ ಕುರಿತು ಪೊಲೀಸರು ಸ್ಥಳಕ್ಕೆ ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಅಧಿಕೃತ ವರದಿ ನೀಡಿದ ನಂತರವಷ್ಟೇ ಹೆಚ್ಚಿನ ಮಾಹಿತಿ ದೊರೆಯಬೇಕಿದೆ.
ಇದನ್ನೂ ಓದಿ : ವೀಕೆಂಡ್ ಕರ್ಫ್ಯೂ ಕುರಿತಾಗಿ ನಿಯಮಾವಳಿ ಹೊರಡಿಸಿದ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ ಎನ್ ರಮೇಶ್.
ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೊಪ್ಪ ತಾಲೂಕಿನ ಬಿಲಗದ್ದೆ ಗ್ರಾಮದ ಕಣಚಿ ನಿವಾಸಿ ಮಿಲಿಂದ ಪೂಜಾರಿ ಎಂದು ಗುರುತಿಸಲಾಗಿದೆ. ಈ ಕುರಿತಾಗಿ ಘಟನೆಗೆ ನಿಖರ ಕಾರಣಗಳೇನು ಎಂದು ಪೊಲೀಸರ ಸಂಪೂರ್ಣ ತನಿಖೆಯ ನಂತರವಷ್ಟೇ ತಿಳಿಯಬೇಕಿದೆ.
ಘಟನಾ ಕುರಿತಾಗಿ ಶೃಂಗೇರಿ ಪೊಲೀಸ್ ಠಾಣೆಗೆ ಮಿಲಿಂದ್ ತಾಯಿ ದೂರು ನೀಡಿದ್ದು ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

0 Comments