ಚಿಕ್ಕಮಗಳೂರು : ಯಾವುದೋ ಹಳೆಯ ವಿವಾದದ ಕಾರಣಕ್ಕೆ ತೋಟದ ಮನೆಗೆ ದುಷ್ಕರ್ಮಿಗಳು ಬೆಂಕಿಯಿಟ್ಟ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೇಕನ ಗದ್ದೆಯ ಸಮೀಪ ಈ ಘಟನೆ ನಡೆದಿದೆ. ವಿಜೇಂದ್ರ ಎಂಬುವವರಿಗೆ ಸೇರಿದ ತೋಟದ ಮನೆಯು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಈ ಕೆಲಸವನ್ನು ಯಾರೋಬೇಕೆಂದೇ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. 

ಈ ಘಟನೆಯಿಂದಾಗಿ ಅಪಾರ ಪ್ರಮಾಣದ ವಸ್ತುಗಳು ನಾಶವಾಗಿದೆ ಸ್ಥಳೀಯ ದುಷ್ಕರ್ಮಿಗಳು ಎಸಗಿದ ಕೃತ್ಯ ಇದಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. 

ಇದನ್ನೂ ಓದಿ : ಶೃಂಗೇರಿಯಲ್ಲಿ ಭೀಕರ ಸರಣಿ ಅಪಘಾತ; ಓರ್ವ ಸಾವು, ಹಲವರು ಆಸ್ಪತ್ರೆಗೆ ದಾಖಲು

ಈ ಕುರಿತು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ ಹಾಗೂ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. 

ತನು ಕೊಟ್ಟಿಗೆಹಾರ, ವರದಿಗಾರರು