ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ತಹಸೀಲ್ದಾರ್ ವಾಹನದ ಚಾಲಕನಾಗಿ ಕೆಲಸ ಮಾಡುತ್ತಿದ್ದ ವಿಜೇತ್ ಎಂಬ 26 ರ ಹರೆಯದ ಯುವಕ ನಿನ್ನೆ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದ , ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ : ಶೃಂಗೇರಿ ತಹಶೀಲ್ದಾರ್ ಕಾರು ಚಾಲಕ ಆತ್ಮಹತ್ಯೆ ಪ್ರಕರಣ, ತನಿಖೆಗೆ ಒತ್ತಾಯ ಆಸ್ಪತ್ರೆ ಬಳಿ ಪ್ರತಿಭಟನೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ತಾಲೂಕು ಕಛೇರಿಯಲ್ಲಿ ತಹಸೀಲ್ದಾರ್ ವಾಹನಕ್ಕೆ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಹೆಗ್ತೂರು ವಿಜೇತ್ ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದ ಈ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿ ಶೃಂಗೇರಿ ತಾಲೂಕು ಕಛೇರಿಯಲ್ಲಿ ಪ್ರಥಮ ದರ್ಜೆ ಗುಮಾಸ್ತ ಆಗಿ ಕೆಲಸ ಮಾಡುತ್ತಿದ್ದ ಶರತ್ ಹಾಗೂ ಇತರರಾದ ರಾಘವೇಂದ್ರ ಹಾಗೂ ನಾಗೇಂದ್ರ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ನಡೆಸುತ್ತಿದ್ದಾರೆ.

ಮೃತ ವಿಜೇತ್ ಬರೆದಿಟ್ಟ ಡೆತ್ ನೋಟ್ ಕೂಡ ಪೊಲೀಸರಿಗೆ ಲಭ್ಯವಾಗಿದ್ದು ಅದರ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತನ ಶರೀರ ಶೃಂಗೇರಿಯ ಸರ್ಕಾರಿ ಆಸ್ಪತ್ರೆಯಲ್ಲೇ ಇದ್ದು ಆತನ ಸಾವಿಗೆ ಸೂಕ್ತ ಪರಿಹಾರ ನೀಡಬೇಕು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ಆತನ ಸಂಬಂಧಿಕರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.