ಸಾಗರ : (ನ್ಯೂಸ್ ಮಲ್ನಾಡ್ ವರದಿ) ಅಡಿಕೆ ಮರದಿಂದ ಕೆಳಗೆ ಬಿದ್ದು ತೋಟದ ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಎಡಜಿಗಳೆಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು ಅಡಿಕೆ ಕೊನೆ ತೆಗೆಯುವ ವೇಳೆ ವ್ಯಕ್ತಿಯು ಮರದಿಂದ ಕೆಳ ಬಿದ್ದು ಸಾವನ್ನಪ್ಪಿದ್ದಾರೆ. 

ಇದನ್ನೂ ಓದಿ :ಕಾಫಿನಾಡಿನಲ್ಲಿ ಆತ್ಮಹತ್ಯೆಗೆ ಶರಣಾದ 42 ರ ವ್ಯಕ್ತಿ ; ಕುಟುಂಬಸ್ಥರ ಆಕ್ರಂದನ

ಕಲ್ಮನೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನರಸಿಂಹ ಗೌಡ ಮೃತ ಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ. ಮರ ಹತ್ತಿ ಕೆಲ ಸಮಯ ಕಳೆದ ಬಳಿಕ ಅವರು ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಮರಣದ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.