ಮೂಡಿಗೆರೆ : (ನ್ಯೂಸ್ ಮಲ್ನಾಡ್ ವರದಿ) ಗಾಂಜಾ ಸಾಗಾಟ ನಡೆಸುತ್ತಿದ್ದ ಆರೋಪಿಗಳನ್ನು ಗಾಂಜಾ ಸಮೇತ ಕಾಫಿನಾಡಿನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ :
ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ ; ಕೆಲ ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತತ್ಕೊಳ ರಸ್ತೆಯಲ್ಲಿ ಬೈಕ್ ನಲ್ಲಿ ಗಾಂಜಾ ಸಾಗಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಆರೋಪಿಗಳಿಂದ 851 ಗ್ರಾಂ ತೂಕದ ಗಾಂಜಾ ಹಾಗೂ ಮೋಟಾರ್ ಬೈಕ್ ವಶಕ್ಕೆ ಪಡೆದಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಮೂಡಿಗೆರೆ ಪಿ.ಎಸ್.ಐ ಹಾಗೂ ಮೂಡಿಗೆರೆ ಪೊಲೀಸ್ ಠಾಣೆಯ ಸಿಬ್ಬಂದಿಗಳು ಭಾಗವಹಿಸಿದ್ದರು, ಈ ಸಂಬಂಧ ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.

0 Comments