ಕೊಪ್ಪ : (ನ್ಯೂಸ್ ಮಲ್ನಾಡ್ ವರದಿ) ಒಂದು ವರ್ಷದ ಹಿಂದೆ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ದೊರೆತ ವ್ಯಕ್ತಿಯ ಶವ ಪತ್ತೆಯಾಗಿದೆ.
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪಪಟ್ಟಣದಲ್ಲಿರುವ ಹಾಳು ಬಿದ್ದಿರುವ ಮನೆಯಲ್ಲಿ ವ್ಯಕ್ತಿಯ ಶವ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಪತ್ತೆಯಾಗಿದೆ, ಬಹಳ ಹಳೆಯದಾದ ಮನೆಯನ್ನು ರಿಪೇರಿ ಮಾಡಲು ತೆರಳಿದಾಗ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿದ್ದ ಶವವನ್ನು ಕಂಡಿದ್ದಾರೆ. 39 ವರ್ಷದ ಗಂಡಸಿನ ಶವ ಎಂದು ಅಂದಾಜಿಸಲಾಗಿದೆ.
ಘಟನೆಯ ಕುರಿತು ಇನ್ನಷ್ಟೇ ಸಂಪೂರ್ಣ ಮಾಹಿತಿ ಲಭಿಸಬೇಕಿದೆ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

0 Comments