ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) 73ನೆಯ ಗಣರಾಜ್ಯೋತ್ಸವದ ಅಂಗವಾಗಿ ಇಂದು ಚಿಕ್ಕಮಗಳೂರು ಜಿಲ್ಲಾದ್ಯಂತ ಅರ್ಥಪೂರ್ಣ ಆಚರಣೆ ನಡೆಯಿತು. ಅಂತೆಯೇ ಶೃಂಗೇರಿ ತಾಲೂಕಿನ ಹಲವೆಡೆಗಳಲ್ಲಿ ಇಂದು ಗಣರಾಜ್ಯೋತ್ಸವದ ಆಚರಣೆ ನಡೆಯಿತು.
ಶೃಂಗೇರಿಯ ಅಡ್ಡಗದ್ದೆ ಗ್ರಾಮ ಪಂಚಾಯತ್ ನಲ್ಲಿ ಇಂದು ಗಣರಾಜ್ಯೋತ್ಸವದ ಆಚರಣೆ ನಡೆಯಿತು. ಇದೇ ಸಂದರ್ಭದಲ್ಲಿ ಅಡ್ಡಗದ್ದೆ ಗ್ರಾಮ ಪಂಚಾಯತ್ ಆವರಣದಲ್ಲಿ ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ ಹಾಗೂ ಮಾಹಿತಿ ಕೇಂದ್ರದ ಉದ್ಘಾಟನೆ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ವಿನೋದ, ಸದಸ್ಯರಾದ ರಾಘವೇಂದ್ರ ಹಂಚಲಿ, ಪಿಡಿಓ ಪ್ರಮೋದ್ ಹಾಗೂ ಗ್ರಾಮ ಪಂಚಾಯತ್ ನಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳು ಹಾಜರಿದ್ದರು.
ಶೃಂಗೇರಿ ಪಟ್ಟಣ ಪಂಚಾಯತ್ ನ ಆವರಣದಲ್ಲಿ ಇಂದು ಗಣರಾಜ್ಯೋತ್ಸವದ ಆಚರಣೆ ಅತ್ಯಂತ ಸಡಗರ ಸಂಭ್ರಮದಿಂದ ನಡೆಯಿತು. ಶೃಂಗೇರಿ ಪಟ್ಟಣ ಪಂಚಾಯತ್ ನ ಅಧ್ಯಕ್ಷರು ಹಾಗೂ ಸದಸ್ಯರು ಪೊಲೀಸ್ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಕೆಲ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.
ದೇಶದ ಅವಿಸ್ಮರಣೀಯ ದಿನವಾದ ಇಂದು ಹೆಚ್ಚಿನ ಉತ್ಸುಕತೆಯಲ್ಲಿ ಎಲ್ಲರೂ ಸಕ್ರಿಯವಾಗಿ ದೇಶ ಸೇವೆಗೆ ಮುಂಬರಬೇಕು ಎಂದು ನೆರೆದಿದ್ದ ಯುವ ಸಮುದಾಯಕ್ಕೆ ಕರೆ ನೀಡಿದರು ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪೊಲೀಸ್ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಅಂತೆಯೇ ಶೃಂಗೇರಿ ತಾಲೂಕಿನ ವೈಕುಂಠಪುರ ಗ್ರಾಮ ಪಂಚಾಯಿತಿಗ್ರಾಮ ಪಂಚಾಯಿತಿ ಡಿಜಿಟಲ್ ಗ್ರಂಥಾಲಯ ಅಧಿಕಾರಿಉದ್ಘಾಟನೆ ಕಾರ್ಯಕ್ರಮ ಇಂದು ನಡೆಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಅಭಿವೃದ್ಧಿ ಅಧಿಕಾರಿಯವರು ಹಾಜರಿದ್ದರು. ಈ ಸಂದರ್ಭದಲ್ಲಿ ಕೂತುಗೋಡು ಗ್ರಾಮ ಪಂಚಾಯತ್ ಸದಸ್ಯರಾದ ಕುಮಾರ್ ಭಟ್ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡಿದರು ಈ ಮೂಲಕ ಗಣರಾಜ್ಯೋತ್ಸವದ ಆಚರಣೆ ನಡೆಯಿತು.
ತಾಲೂಕಿನ ಹಲವೆಡೆಗಳಲ್ಲಿ ಇಂದು ಅತ್ಯಂತ ಸಂಭ್ರಮದಿಂದ 73 ನೆಯ ಗಣರಾಜ್ಯೋತ್ಸವದ ಆಚರಣೆ ನಡೆಯಿತು.

0 Comments